ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಹಾಗೂ ಅಕ್ರಮ ಗರ್ಭಪಾತ ಆರೋಪ – ದೂರು ದಾಖಲು.
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಗಂಭೀರ ಘಟನೆ ನಡೆದಿದೆ.
ಘಟನೆಯ ವಿವರ
ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕ ಹೆಚ್.ಒ. ರಾಜಣ್ಣ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈಕೃತ್ಯದಿಂದ ಬಾಲಕಿ ಗರ್ಭ ಧರಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ರಾಜಣ್ಣ, ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಶಂಕರಲಕ್ಷ್ಮೀ ಅವರ ಸಹಾಯದಿಂದ ಬಾಲಕಿಗೆ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪೋಕ್ಸೋ ಅಡಿ ದೂರು ದಾಖಲು
ವಿಷಯ ತಿಳಿಯುತ್ತಿದ್ದಂತೆಯೇ ಮಕ್ಕಳ ರಕ್ಷಣಾಧಿಕಾರಿ ರೇಖಾ ಅವರು ಚಳ್ಳಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕ ರಾಜಣ್ಣ ಮತ್ತು ಗರ್ಭಪಾತ ಮಾಡಿದ ವೈದ್ಯೆ ಶಂಕರಲಕ್ಷ್ಮೀ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
For More Updates Join our WhatsApp Group :




