ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು-CMಸಿದ್ದರಾಮಯ್ಯ

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು-CMಸಿದ್ದರಾಮಯ್ಯ

ಸಚಿವ ಆಕಾಂಕ್ಷಿಗಳ ದೆಹಲಿ ಭೇಟಿ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್  ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು  ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ  ಮಾತನಾಡಿದರು.ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು.

ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ  ಸಂಪುಟ ಪುನರ್ರಚನೆ ವಿಳಂಬಕ್ಕೆ ಕಾರಣವಿರಬಹುದುಎಂದರು.

ಪಕ್ಷವಿರೋಧಿ ಕಾರ್ಯಗಳು ನಡೆದಿದ್ದರೂ ಕಾಂಗ್ರೆಸ್ ಗೆ ಗೆಲುವು

ಕಾಂಗ್ರೆಸ್ ನಲ್ಲಿ ಪಕ್ಷ ವಿರೋಧಿಗಳ ರಾಜಿನಾಮೆ ಪರ್ವ ಆರಂಭವಾಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಇದುವರೆಗೆ ರಾಜಿನಾಮೆ ನೀಡಿಲ್ಲ. ನೀಡಬಹುದೇನೋ ಎಂದರು.

ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ.  ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ. ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು, ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಕಾರ್ಯಗಳ ಬಗ್ಗೆ  ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *