ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಭೀಕರ ಹ*: ಹಿಮಾಚಲದಲ್ಲಿ ಶಾಕ್ ಘಟನೆ.

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಭೀಕರ ಹ*: ಹಿಮಾಚಲದಲ್ಲಿ ಶಾಕ್ ಘಟನೆ.

ಕಾಲೇಜಿಗೆ ಹೊರಟಿದ್ದ 19 ವರ್ಷದ ಯುವತಿಗೆ ಕ್ರೂರ ದಾಳಿ – ಶಿರಚ್ಛೇದ ಮಾಡಿ ಹಂತಕರು ಪರಾರಿ

ಶಿಮ್ಲಾ: ಹಿಮಾಚಲ ಪ್ರದೇಶ ಇಂದು ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ರಸ್ತೆಯ ಮಧ್ಯದಲ್ಲೇ ಏಕಾಏಕಿ ದಾಳಿ ನಡೆಸಿದ್ದಾರೆ. ಕ್ರೌರ್ಯದ ಮಿತಿಯನ್ನೇ ಮೀರಿದ ಹಂತಕರು, ಆಕೆಯ ತಲೆಯನ್ನು ಕಡಿದು ಹಾಕಿ ಪರಾರಿಯಾಗಿದ್ದಾರೆ.

ರಸ್ತೆಯ ತುಂಬೆಲ್ಲಾ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯ ದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಕಂಡು ದಬಾಬಾಜಿ ಹೋಗಿದ್ದಾರೆ.

ಘಟನಾ ಸ್ಥಳಕ್ಕೆ ಮಂಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ವಿನೋದ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

ಪ್ರಸ್ತುತ, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಸರ್ಕಾಘಾಟ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಜನರು ಭೀತಿಯಲ್ಲಿ ದಿನ ದೂಡುವಂತಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *