Coal India Limitedನಲ್ಲಿ 1055 ಹುದ್ದೆಗಳ ನೇಮಕಾತಿ.

Coal India Limitedನಲ್ಲಿ 1055 ಹುದ್ದೆಗಳ ನೇಮಕಾತಿ.

ಮೈನಿಂಗ್ ಸರ್ದಾರ್, ಅಸಿಸ್ಟಂಟ್ ಫೋರ್ಮನ್ ಸೇರಿದಂತೆ ಹುದ್ದೆಗಳಿಗೆ ಅರ್ಜಿ ಆಹ್ವಾನ – ತಿಂಗಳಿಗೆ ₹47,330 ಆರಂಭಿಕ ವೇತನ

ಕೇಂದ್ರ ಕಲ್ಲಿದ್ದಲು ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ, ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಖಾಲಿ ಇರುವ 1055 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ  ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಮೈನಿಂಗ್ ಸರ್ದಾರ್ (577), ಸಹಾಯಕ ಫೋರ್‌ಮನ್ (435) ಮತ್ತು ಡೆಪ್ಯೂಟಿ ಸರ್ವೇಯರ್ (43) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15, ರಿಂದ ಮೇ 14 ರವರೆಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಅಥವಾ ಪದವಿ ಪಡೆದಿರಬೇಕು. ಇದರೊಂದಿಗೆ ಮೈನಿಂಗ್ ಸರ್‌ಡಾರ್ಶಿಪ್, ಗ್ಯಾಸ್ ಟೆಸ್ಟಿಂಗ್ ಮತ್ತು ಪ್ರಥಮ ಚಿಕಿತ್ಸಾ ಪ್ರಮಾಣಪತ್ರಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷದೊಳಗಿರಬೇಕು; ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ಮತ್ತು ವೇತನದ ವಿವರ:

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು 1180 ರೂಪಾಯಿಗಳ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ ಎಸ್‌ಸಿ, ಎಸ್‌ಟಿ, ಮಹಿಳೆಯರು ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 47,330 ರೂಪಾಯಿಗಳ ವೇತನದ ಜೊತೆಗೆ ಸರ್ಕಾರದ ನಿಯಮಾವಳಿಯಂತೆ ಇತರ ಎಲ್ಲಾ ಭತ್ಯೆಗಳನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ:

ಅಭ್ಯರ್ಥಿಗಳ ಅಂತಿಮ ಆಯ್ಕೆಯು ಸಂಪೂರ್ಣವಾಗಿ ಆನ್‌ಲೈನ್ ಲಿಖಿತ ಪರೀಕ್ಷೆಯ ಮೇಲೆ ಆಧಾರಿತವಾಗಿರುತ್ತದೆ. ಪರೀಕ್ಷೆಯು ಒಟ್ಟು 100 ಅಂಕಗಳ 100 ಪ್ರಶ್ನೆಗಳನ್ನು ಒಳಗೊಂಡಿದ್ದು, ಇದರಲ್ಲಿ ತಾಂತ್ರಿಕ ಜ್ಞಾನಕ್ಕೆ ಸಂಬಂಧಿಸಿದ 80 ಪ್ರಶ್ನೆಗಳು ಮತ್ತು ಸಾಮಾನ್ಯ ಅರಿವು ಹಾಗೂ ಆಪ್ಟಿಟ್ಯೂಡ್‌ಗೆ ಸಂಬಂಧಿಸಿದ 20 ಪ್ರಶ್ನೆಗಳು ಇರುತ್ತವೆ. ಈ ಪರೀಕ್ಷೆಯ ಪ್ರಮುಖ ವೈಶಿಷ್ಟ್ಯವೆಂದರೆ ಇಲ್ಲಿ ಯಾವುದೇ ಋಣಾತ್ಮಕ ಅಂಕಗಳು ಇರುವುದಿಲ್ಲ, ಇದು ಅಭ್ಯರ್ಥಿಗಳಿಗೆ ಹೆಚ್ಚಿನ ಅಂಕ ಗಳಿಸಲು ಸಹಕಾರಿಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *