ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು CM ತೀರ್ಮಾನ: DCM

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು CM ತೀರ್ಮಾನ: DCM

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆಗೆ ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರು: “ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ” ಎಂದರು.

ಶಾಸಕರಿಗೆ ನೇರವಾಗಿ ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, “ಶಾಸಕರು ದೆಹಲಿಗೆ ಹೋಗಿರುವುದು, ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅವರು ತಮ್ಮ ಬೇಡಿಕೆ ಕೇಳಲಿ. ಆದರೆ ಪಕ್ಷಕ್ಕೆ ಶಿಸ್ತಿನಿಂದ ಇರಬೇಕು ಅಷ್ಟೇ. ಅವರೆಲ್ಲರೂ ನಮ್ಮ ಸಹೋದ್ಯೋಗಿಗಳು. ಹೀಗಾಗಿ ಅವರಿಗೆ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದೇನೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದೇನೆ” ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *