ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ಯುವತಿಗೆ ವಿಷ – ಕುಟುಂಬದ ಕ್ರೌರ್ಯ

ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ಯುವತಿಗೆ ವಿಷ – ಕುಟುಂಬದ ಕ್ರೌರ್ಯ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ.

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿ ಪ್ರದೇಶದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣವು ರಾಜ್ಯದಾದ್ಯಂತ ಆತಂಕ ಮೂಡಿಸಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ ಮಾಡಿ, ಬಳಿಕ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಮದುವೆಯ ಬಳಿಕವೂ ಪ್ರಿಯಕರನ ಜೊತೆ ಸಂಪರ್ಕ

ಸತ್ತೆವ್ವಾ ನದಿಗುಡಿ ಗ್ರಾಮದ ಕೃಷ್ಣಾ ಪಾಟೀಲ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಸಂಬಂಧ ಕುಟುಂಬಕ್ಕೆ ತಿಳಿದ ನಂತರ, ನಾಲ್ಕು ವರ್ಷಗಳ ಹಿಂದೆ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ ಹೆಳವಿ ಜೊತೆ ವಿವಾಹ ಮಾಡಲಾಗಿತ್ತು. ಆದಾಗ್ಯೂ, ಮದುವೆಯಾದ ಬಳಿಕವೂ ಸತ್ತೆವ್ವಾ ತನ್ನ ಪ್ರಿಯಕರ ಕೃಷ್ಣಾ ಜೊತೆ ಸಂಪರ್ಕದಲ್ಲಿದ್ದು, 17 ಫೆಬ್ರವರಿ 2026ರಂದು ಇಬ್ಬರೂ ಮನೆ ಬಿಟ್ಟು ಓಡಿ ಹೋಗಿ, ಸವದತ್ತಿ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಆರೋಪಿಗಳು ಅರೆಸ್ಟ್

ಸತ್ತೆವ್ವಾ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪ್ರಿಯಕರ ಕೃಷ್ಣಾ, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಈ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಸತ್ತೆವ್ವಾಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕೃಷ್ಣಾ ಮನವಿ ಮಾಡಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *