ವಿನಯ್ ಕುಲಕರ್ಣಿ ಸೇರಿ 19 ಮಂದಿಗೆ ದೋಷಿ ತೀರ್ಪು.
ಬೆಂಗಳೂರು: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 21ರ ಪೈಕಿ 19 ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಏಪ್ರಿಲ್ 15) ತೀರ್ಪು ನೀಡಿ ಆದೇಶ ಹೊರಡಿಸಿದೆ. ಹೀಗಾಗಿ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಿದ್ದು, ನಾಳೆ (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ ವಾದಮಂಡನೆ ನಡೆಯಲಿದೆ. ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣವನ್ನೂ ಸಹ ಪ್ರಕಟಿಸಲಿದೆ.
21ರಲ್ಲಿ 19 ಮಂದಿ ಅಪರಾಧಿಗಳು
21 ಆರೋಪಿಗಳ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇದರಿಂದ ಇವರಿಬ್ಬರನ್ನು ಹೊರತುಪಡಿಸಿ ಉಳಿದವರ ತೀರ್ಪು ಪ್ರಕಟಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿದೆ.
2016 ಜೂನ್ನಲ್ಲಿ ಯೋಗಿಶ್ ಗೌಡ ಕೊಲೆಯಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಕೊಲೆಗೆ ಒಳಸಂಚು ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ ಪೊಲೀಸರ ಮುಂದೆ ಆರು ಜನ ಆರೋಪಿಗಳು ಶರಣಾಗಿದ್ದರು. ಯೋಗಿಶ್ ಗೌಡ ಕುಟುಂಬಸ್ಥರ ಮನವಿ ಮೇರೆಗೆ ತನಿಖೆಯನ್ನು ಸಿಬಿಐಗೆ ನೀಡಲಾಗಿತ್ತು. 2019ರಲ್ಲಿ ಸಿಬಿಐ ಗೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ತನಿಖೆ ನಡಸಿದ್ದ ಸಿಬಿಐ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು.
For More Updates Join our WhatsApp Group :




