11.86 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ – 10 ಮಂದಿ ಬಂಧನ
ಬೆಂಗಳೂರು: ಮಾದಕ ವಸ್ತು ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಬ್ಬರು ವಿದೇಶಿ ಮಹಿಳೆಯರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ ಭಾರಿ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 5.9 ಕೆಜಿ ಎಂಡಿಎಂಎ (MDMA), 1.15 ಕೆಜಿ ಕೊಕೇನ್, 21 ಕೆಜಿ ಗಾಂಜಾ ಮತ್ತು 19 ಗ್ರಾಂ ಎಕ್ಸ್‌ಟೆಸಿ ಮಾತ್ರೆಗಳು ಸೇರಿವೆ. ಜೊತೆಗೆ ಕೃತ್ಯಕ್ಕೆ ಬಳಸುತ್ತಿದ್ದ ಒಂದು ದ್ವಿಚಕ್ರ ವಾಹನವನ್ನು ಸೀಜ್ ಮಾಡಲಾಗಿದೆ. ಈ ಪೈಕಿ ವಿದೇಶಿ ಮಹಿಳೆಯರು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.
ಬೆಂಗಳೂರಿನಲ್ಲಿ ಇತ್ತೀಚಿನ ಪ್ರಮುಖ ಡ್ರಗ್ಸ್ ಜಪ್ತಿ ಪ್ರಕರಣಗಳು
- ಮಾರ್ಚ್ 12, 2026: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಹೆರಾಯಿನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆಯ ಬಂಧನ.
- ಮಾರ್ಚ್ 28, 2026: ಎಲೆಕ್ಟ್ರಾನಿಕ್ ಸಿಟಿಯ ನೈಜೀರಿಯನ್ ಪ್ರಜೆಯಿಂದ 2.5 ಕೋಟಿ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ವಶ.
- ಏಪ್ರಿಲ್ 05, 2026: ಸಿಸಿಬಿ ಪೊಲೀಸರಿಂದ ದೊಡ್ಡಬಳ್ಳಾಪುರ ರಸ್ತೆಯಲ್ಲಿ ಅಂತರಾಷ್ಟ್ರೀಯ ಡ್ರಗ್ಸ್ ಜಾಲ ಭೇದಿಸಿ 5 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ.
- ಏಪ್ರಿಲ್ 16, 2026: ನಗರದ 6 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಮತ್ತು 10 ಆರೋಪಿಗಳ ಬಂಧನ.
For More Updates Join our WhatsApp Group :




