ಹೊಸ ಎಸ್ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ.
ಬೆಂಗಳೂರು: ಚಾರಣ ಸಂದರ್ಭಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ನಾಪತ್ತೆ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಜಾರಿಗೆ ತಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸಚಿವರು ಹೇಳಿದ್ದೇನು?
ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ ಹಲವು ಕಡೆಗಳಲ್ಲಿ ಚಾರಣಕ್ಕೆ ತೆರಳಿದವರು ನಾಪತ್ತೆಯಾಗಿರುವುದು ಹಾಗೂ ಚಿಕ್ಕಮಗಳೂರಿನಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಹೊಸ ನಿಯಮಗಳ ಪ್ರಕಾರ, ಚಾರಣಿಗರು ಆನ್ಲೈನ್ ಮೂಲಕವೇ ಬುಕ್ಕಿಂಗ್ ಮಾಡಬೇಕು. 10 ಮಂದಿಗೆ ಒಬ್ಬ ಗೈಡ್ ಕಡ್ಡಾಯವಾಗಿದ್ದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಟ್ರೆಕಿಂಗ್ ಹೋಗುವವರ ಮೊಬೈಲ್ಗಳಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡಲಾಗುತ್ತದೆ. ಜೊತೆಗೆ ಗೈಡ್ಗಳಿಗೆ ಜಿಪಿಎಸ್ ಸೌಲಭ್ಯ ಇರುವ ವಾಕಿಟಾಕಿ ನೀಡಲಾಗುತ್ತದೆ ಎಂದಿದ್ದಾರೆ.
ಪ್ರತಿ ಸ್ಥಳದ ಕ್ಯಾರಿಂಗ್ ಕೆಪಾಸಿಟಿಯನ್ನು ನಿಯಂತ್ರಿಸಲಾಗಿದ್ದು, ಒಮ್ಮೆ 150 ಮಂದಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಒಂದು ತಂಡ ಮರಳಿದ ಬಳಿಕವೇ ಮತ್ತೊಂದು ತಂಡವನ್ನು ಕಳುಹಿಸಲಾಗುತ್ತದೆ. ಟಾರ್ಚ್, ಹೆಡ್ ಲ್ಯಾಂಪ್ ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಹೇಳಿರು ಖಂಡ್ರೆ, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.
For More Updates Join our WhatsApp Group :




