H5N1 ಭಯ ಬೇಡ, ಜಾಗರೂಕತೆ ಮುಖ್ಯ: ದಿನೇಶ್ ಗುಂಡೂರಾವ್

H5N1 ಭಯ ಬೇಡ, ಜಾಗರೂಕತೆ ಮುಖ್ಯ: ದಿನೇಶ್ ಗುಂಡೂರಾವ್

ಬೆಂಗಳೂರು ಹೆಸರಘಟ್ಟದಲ್ಲಿ ಪ್ರಕರಣ ಪತ್ತೆ

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ H5N1 ಹಕ್ಕಿಜ್ವರ ದೃಢಪಟ್ಟಿದ್ದು, ನಿಉಯಮಾವಳಿಯಂತೆ ತಕ್ಷಣವೇ ನಿಯಂತ್ರಣಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ.

ಎಪ್ರಿಲ್ 16 ರಂದು ರಾಜ್ಯ, ಜಿಲ್ಲಾ ಮತ್ತು ಪಿ ಹೆಚ್ ಸಿ ಆರ್ ಆರ್ ಟಿ ತಂಡ  ಸ್ಥಳಕ್ಕೆ ಭೇಟಿ ನೀಡಿ ಮುತ್ಕೂರು ಗ್ರಾಮವನ್ನು ಸೋಂಕಿತ ವಲಯ(3km ವ್ಯಾಪ್ತಿ) ಮತ್ತು ಸುತ್ತಲಿನ 10km ಪ್ರದೇಶವನ್ನು ಕಣ್ಗಾವಲು ವಲಯ ಎಂದು ಘೋಷಿಸಲಾಗಿದೆ. ಎಪ್ರಿಲ್ 15 ರಂದು 7444 ಕೋಳಿಗಳು, 14 ಸಾವಿರಕ್ಕೂ ಅಧಿಕ ಮೊಟ್ಟೆಗಳು, 2250 ಕೆಜಿ ಕೋಳಿ ಆಹಾರವನ್ನು ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ಕಲ್ಲಿಂಗ್ ಮಾಡಿ ವಿಲೇವಾರಿ ಮಾಡಲಾಗಿದ್ದು, ಇದರಲ್ಲಿ ಭಾಗಿಯಾದ 10 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ, ಒಸೆಲ್ಟಾಮಿವಿರ್ ಔಷಧದೊಂದಿಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ. ಈ ಸ್ಥಳವನ್ನು ಒಂದು ವರ್ಷದವರೆಗೆ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

ಈವರಿಗೆ ಯಾವುದೇ ಮನುಷ್ಯರಲ್ಲಿ ಈ ರೋಗ ವರದಿಯಾಗಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ. ಆದರೆ ಜಾಗರೂಕರಾಗಿರಬೇಕು. ಅನಾರೋಗ್ಯ/ಸತ್ತ ಹಕ್ಕಿಗಳ ಸಂಪರ್ಕದಿಂದ ದೂರ ಇರಬೇಕು. ಯಾವುದೇ ರೀತಿಯ ಅನುಮಾನ ಕಂಡುಬಂದರೆ ತಕ್ಷಣ ಪಶುಸಂಗೋಪನೆ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಸರಿಯಾಗಿ ಬೇಯಿಸಿದ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಿ. ಆರೋಗ್ಯ ಇಲಾಖೆ ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *