ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ಬೆಂಗಳೂರು: ನಲಪಾಡ್ ನಿವಾಸದ ಮೇಲೆ ಇತ್ತೀಚೆಗೆ ನಡೆದ ಇಡಿ ದಾಳಿಯ ಕುರಿತು ಮೊಹಮ್ಮದ್ ಹಾರಿಸ್ ನಲಪಾಡ್ ಅವರು ಪ್ರತಿಕ್ರಿಯೆ ನೀಡಿದ್ದು, ಈ ದಾಳಿ ತಮ್ಮ ತಂದೆ ಎನ್.ಎ. ಹಾರಿಸ್ ಅವರಿಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ದಾಳಿಯು ತಮ್ಮ ಮತ್ತು ತಮ್ಮ ಸಹೋದರ ಉಮರ್ ಹ್ಯಾರಿಸ್ ನಲಪಾಡ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ. ತಮ್ಮ ತಂದೆ ಸಚಿವ ಸ್ಥಾನ ಪಡೆಯುವುದನ್ನು ತಡೆಯಲು ರಾಜಕೀಯ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಮೊಹಮ್ಮದ್ ಹಾರಿಸ್ ನಲಪಾಡ್ ಅವರ ಪ್ರಕಾರ, ಇಡಿ ಅಧಿಕಾರಿಗಳು ಅವರ ಕುಟುಂಬದ ನಿವಾಸಕ್ಕೆ ಬಂದಿದ್ದು, ತಾವು ಎನ್.ಎ. ಹಾರಿಸ್ ಅವರ ಮಕ್ಕಳು ಮತ್ತು ಆ ಮನೆಯಲ್ಲಿ ವಾಸಿಸುತ್ತಿರುವುದರಿಂದ ಮಾತ್ರ.ಈ ಪ್ರಕರಣಕ್ಕೂ ಮತ್ತಿ ನಮ್ಮ ತಂದೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. 2021 ರಲ್ಲಿ ಇಸಿಐಆರ್ (ECIR) ದಾಖಲಾಗಿತ್ತಾದರೂ, ದಾಳಿಯನ್ನು ಐದು-ಆರು ವರ್ಷಗಳ ನಂತರ,ಅಂದರೆ 2026 ರಲ್ಲಿ ನಡೆಸಲು ಅಧಿಕಾರಿಗಳು ಬಂದಿರುವುದನ್ನು ಅವರು ಪ್ರಶ್ನಿಸಿದ್ದಾರೆ. “ಯಾರಾದರೂ ಅಪರಾಧ ಮಾಡಿದರೆ, ಆರು ವರ್ಷಗಳ ಕಾಲ ಸಾಕ್ಷ್ಯಗಳನ್ನು ಇಟ್ಟುಕೊಂಡು ಮನೆ ಶೋಧ ಮಾಡಲು ಕಾಯುತ್ತಾರಾ?” ಎಂದು ನಲಪಾಡ್ ಪ್ರಶ್ನಿಸಿದ್ದಾರೆ
ವೈಯಕ್ತಿಕ ನೆಲೆಯಲ್ಲಿ ಮಾತನಾಡಿದ ಮೊಹಮ್ಮದ್ ಹಾರಿಸ್ ನಲಪಾಡ್, “ನಾನು ಒಬ್ಬ ಒಳ್ಳೆಯ ಮಗನಂತೂ ಆಗಕ್ಕೆ ಆಗಿಲ್ಲ. ಯಾವಾಗಲೂ ನನ್ನ ತಂದೆ ತಾಯಿಗೆ ನನ್ನಿಂದ ಕೆಟ್ಟದ್ದೇ ಆಗಿರೋದು” ಎಂದು ಭಾವುಕರಾಗಿ ಹೇಳಿದ್ದಾರೆ.ಯೂತ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಕೆಲಸ ಮಾಡಿ, ಪೋಷಕರಿಗೆ ಒಳ್ಳೆಯ ಹೆಸರು ತರಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ತಂದೆಯಂತೆ ಉತ್ತಮ ಮಗನಾಗಿ ಬಾಳಲು ಪ್ರಯತ್ನಿಸುತ್ತಿದ್ದರೂ, ಪ್ರತಿ ಬಾರಿ ಇಂತಹ ಕೇಸುಗಳನ್ನು ಇಟ್ಟುಕೊಂಡು ತಮ್ಮನ್ನು ಮತ್ತು ತಮ್ಮ ಕುಟುಂಬವನ್ನುಗುರಿಯಾಗಿಸಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ದಾಳಿಯು ತಮ್ಮ ತಂದೆಗೆ ಸ್ಥಾನಮಾನ ಸಿಗದಂತೆ ತಡೆಯುವ ಉದ್ದೇಶದಿಂದ, ಸೂಕ್ತ ಸಮಯದಲ್ಲಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
For More Updates Join our WhatsApp Group :



