ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ- D.Sರಮೇಶ್

ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ- D.Sರಮೇಶ್

ಮಳೆಗಾಲಕ್ಕೂ ಮುನ್ನ ಪೂರ್ವ ನಗರ ಪಾಲಿಕೆ ಆಯುಕ್ತರ ಪರಿಶೀಲನೆ

ಬೆಂಗಳೂರು: ಪೂರ್ವ ನಗರ ಪಾಲಿಕೆ ಆಯುಕ್ತರಾದ  ಡಿ.ಎಸ್. ರಮೇಶ್ ರವರು ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಯ ಸಂದರ್ಭದಲ್ಲಿ ಪ್ರವಾಹ ಪೀಡಿತವಾಗುವ ಸಾಧ್ಯತೆಯಿರುವ ಪ್ರದೇಶಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವಿವಿಧ ಸ್ಥಳಗಳಲ್ಲಿ ನಡೆಯುತ್ತಿರುವ ಮಳೆ ನೀರು ಕಾಲುವೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಾಮಗಾರಿ ಪರಿಶೀಲನೆ

ಗೆದ್ದಲಹಳ್ಳಿ ರೈಲ್ವೆ ವೆಂಟ್ ಬಳಿ ನಡೆಯುತ್ತಿರುವ ಪ್ರಮುಖ ಕಾಮಗಾರಿಯನ್ನು ಪರಿಶೀಲಿಸಿದ ಆಯುಕ್ತರು, ರೈಲ್ವೆ ಇಲಾಖೆಯ ಸಮನ್ವಯದೊಂದಿಗೆ ಈಗಾಗಲೇ ಎರಡು ಗರ್ಡರ್‌ಗಳನ್ನು ಅಳವಡಿಸಲಾಗಿರುತ್ತದೆ. ಕಾಸ್ಟಿಂಗ್ ಆಗಿ ಸಿದ್ಧಗೊಂಡಿರುವ ಒಂದು ಕಾಂಕ್ರೀಟ್ ಬಾಕ್ಸನ್ನುಸುಮಾರು 10 ಮೀಟರ್ ವರೆಗೆ ಪುಶಿಂಗ್ ಕೆಲಸವನ್ನು ಸಹ  ನಿರ್ವಹಿಸಲಾಗಿರುತ್ತದೆ. ಎರಡು ಕಾಂಕ್ರೀಟ್ ಬಾಕ್ಸ್ ಗಳ ಪುಶಿಂಗ್ ಕಾರ್ಯವನ್ನು ಮೇ 30ರೊಳಗಾಗಿ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿಶ್ವಬ್ಯಾಂಕ್ ಅನುದಾನದ ಅಡಿಯಲ್ಲಿ  ಪ್ರಮುಖ ಸ್ಥಳಗಳಲ್ಲಿ ಕೈಗೊಂಡಿರುವ ಮಳೆ ನೀರು ಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಆಯುಕ್ತರು, ಗುಂಜೂರು ರಾಜಕಾಲುವೆವರ್ತೂರು ಕೆರೆ ಕೋಡಿ ರಾಜಕಾಲುವೆ, ಮಣಿಪಾಲ್ ಆಸ್ಪತ್ರೆ ಸಮೀಪದ ರಾಜಕಾಲುವೆ, ಯಮಲೂರು (ಎಪ್ಸಿಲಾನ್ ಪ್ರದೇಶ), ಚಳ್ಳಘಟ್ಟ, ಎಸ್‌ಜಿಆರ್ ಡೆಂಟಲ್ ಕಾಲೇಜು ಸಮೀಪ ಹಾಗೂ ಮುನ್ನೇಕೊಳಲು ಪ್ರದೇಶಗಳಲ್ಲಿನ ಮಳೆ ನೀರು ಕಾಲುವೆಗಳನ್ನು ಪರಿಶೀಲಿಸಿದ ಆಯುಕ್ತರು;

ಮುಂಗಾರು ಮಳೆಗೂ ಮುನ್ನ ಪ್ರವಾಹ ನಿಯಂತ್ರಣ ಹಾಗೂ ಮಳೆ ನೀರು ನಿರ್ವಹಣೆಗೆ ಅಗತ್ಯ ಮೂಲಸೌಕರ್ಯಗಳನ್ನು ಬಲಪಡಿಸುವುದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಪ್ರಮುಖ ಆದ್ಯತೆಯಾಗಿದ್ದು, ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಗರದಲ್ಲಿ ಪ್ರವಾಹ ಸಮಸ್ಯೆ ತಡೆಯಲು ಹಾಗೂ ಸುರಕ್ಷಿತ ಪರಿಸರ ಒದಗಿಸಲು ಬೆಂಗಳೂರು ಪೂರ್ವ ನಗರ ಪಾಲಿಕೆ ಬದ್ಧವಾಗಿದೆ ಎಂದು ಆಯುಕ್ತರು ತಿಳಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *