ರಾಜ್ಯದ ಪೋಷಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ .!

ರಾಜ್ಯದ ಪೋಷಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ .!

`LKG-PUC’ ವರೆಗೆ ಉಚಿತ ನೋಟ್ ಬುಕ್ ವಿತರಣೆ.

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಎಲ್.ಕೆ.ಜಿ.ಯಿಂದ ದ್ವಿತೀಯ ಪಿಯುಸಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಮೊದಲ ಬಾರಿಗೆ ಉಚಿತವಾಗಿ ನೋಟ್ಬುಕ್ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿಯವರೆಗೆ ಓದುತ್ತಿರುವ 38 ಲಕ್ಷ ವಿದ್ಯಾರ್ಥಿಗಳು ಹಾಗೂ ಪಿಯುಸಿಯ 8 ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು 46 ಲಕ್ಷ ಮಕ್ಕಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಈ ಬೃಹತ್ ಯೋಜನೆಗಾಗಿ ಸುಮಾರು 80 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ವೆಚ್ಚವನ್ನು ‘ಸಮಗ್ರ ಶಿಕ್ಷಣ ಕರ್ನಾಟಕ’ ಯೋಜನೆಯಡಿ ಭರಿಸಲು ನಿರ್ಧರಿಸಲಾಗಿದ್ದು, ಪರ್ಯಾಯವಾಗಿ ಇತರ ಅನುದಾನಗಳ ಬಳಕೆಯ ಬಗ್ಗೆಯೂ ಇಲಾಖೆ ಗಮನಹರಿಸಿದೆ.

ಚಟುವಟಿಕೆ ಆಧಾರಿತ ಕಲಿಕೆಗೆ ಒತ್ತು:

ಕೇವಲ ಪಠ್ಯಪುಸ್ತಕಗಳಲ್ಲದೆ, ಮಕ್ಕಳಲ್ಲಿ ಚಟುವಟಿಕೆ ಆಧಾರಿತ ಕಲಿಕೆಯನ್ನು ಉತ್ತೇಜಿಸಲು ಪೂರಕವಾದ ವಿಶೇಷ ಪುಸ್ತಕಗಳ ಮುದ್ರಣ ಕಾರ್ಯ ಈಗಾಗಲೇ ಆರಂಭವಾಗಿದೆ. ಕೌಶಲ್ಯ ಅಭಿವೃದ್ಧಿಗೆ ಪೂರಕವಾಗಿ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಕೌಶಲ್ಯ ಶಿಕ್ಷಣ’ ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಿ ಉಚಿತವಾಗಿ ವಿತರಿಸಲಾಗುವುದು.

ಈವರೆಗೆ ಕೇವಲ ಪಠ್ಯಪುಸ್ತಕಗಳನ್ನು ಮಾತ್ರ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ಈಗ ಎಲ್.ಕೆ.ಜಿ ಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ನೋಟ್ಬುಕ್ ನೀಡುತ್ತಿರುವುದು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *