GBA ಚುನಾವಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ.!

GBA ಚುನಾವಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ.!

ನಲಾಪಾಡ್ ಮನೆ ಮೇಲೆ ದಾಳಿಗೆ ರಾಜಕೀಯ ಬಣ್ಣದ ಅವಶ್ಯಕತೆ ಇಲ್ಲ- ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರು ಹಿರಿಯರಿದ್ದಾರೆ ಈ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇಂಥಹ ಹೇಳಿಕೆ ಅವರ ವ್ಯಕ್ತಿತ್ವಕ್ಕೆ ದಕ್ಕೆಯಾಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೋದಿ ಟೆರಿರಿಸ್ಟ್ ಎಂದು ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು, ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯದಲ್ಲಿ ಹಿರಿಯರು.  ಸಂಸ್ಕಾರದಿಂದ, ಸಂಯಮದಿಂದ ವರ್ತನೆ ಮಾಡಬೇಕು. ಇವರು ಯುವಕರಿಗೆ ದಾರಿದೀಪ ಆಗಬೇಕು, ವೈಯಕ್ತಿಕ ಹೇಳಿಕೆ, ನಿಂದನೆ ಮಾಡಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಹ್ಯಾರಿಸ್ ಪುತ್ರರ ನಿವಾಸದ ಮೇಲೆ ಇಡಿ ದಾಳಿ ವಿಚಾರ, ಇಡಿ ಅವರ ಮಾನದಂಡದ ಮೇಲೆ ದಾಳಿ ಮಾಡುತ್ತದೆ. ಇಡಿ ಒಂದು ಸ್ವಾಯತ್ತ ಸಂಸ್ಥೆ. ಈ ದಾಳಿಗೆ ರಾಜಕೀಯ ಬಣ್ಣ ಕಟ್ಟಿ ದಿಕ್ಕು ತಪ್ಪಿಸುವ ಅವಶ್ಯಕತೆ ಇಲ್ಲ ಎಂದು ನಿಖಿಲ್ ಅವರು ಹೇಳಿದರು.

ಆಗ್ನೇಯ ಕ್ಷೇತ್ರದ ಪರಿಷತ್ ಟಿಕೆಟ್ ಫೈಟ್ ವಿಚಾರಕ್ಕೆ ಮಾತನಾಡಿದ ಅವರು, ಪದವೀಧರರ ಕ್ಷೇತ್ರಕ್ಕೆ ಈಗಾಗಲೇ ಮಿತ್ರ ಪಕ್ಷ ಟಿಕೆಟ್ ಘೋಷಿಸಿದೆ. ಒಇ ವಿಚಾರವಾಗಿ ಕುಮಾರಣ್ಣ , ನಿತಿನ್ ನಬಿನ್, ನಡ್ಡಾ ಭೇಟಿ ಮಾಡಿದ್ದಾರೆ.

ರಾಜಣ್ಣ, ನಾಗೇಂದ್ರ ಅವರನ್ನ ಸಚಿವ ಸಂಪುಟದಿಂದ ಕೈಬಿಟ್ಟಾಗಿದೆ. ಅ ಅಂತಹವರಾದ ಜಬ್ಬಾರ್, ನಜೀರ್ ತಲೆದಂಡ ಆಗಿದೆ. ದಾವಣಗೆರೆಯಲ್ಲಿ ಅಲ್ಪಸಂಖ್ಯಾತರ ಹೆಚ್ಚಾಗಿದ್ದಾರೆ. ಆ ಕ್ಷೇತ್ರದಲ್ಲಿ ಮುಸ್ಲಿಂ ಬಾಂಧವರಿಗೆ ಟಿಕೆಟ್ ಕೊಡಬೇಕಿತ್ತು. ಅಲ್ಲಿ ಜಬ್ಬಾರ್, ನಜೀರ್ ಕೈ ಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *