97ನೇ ಜನ್ಮದಿನ ಆಚರಣೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ, ಗಣ್ಯರ ಸಮ್ಮಿಲನ
ಬೆಂಗಳೂರು: ವರನಟ ಡಾ.ರಾಜಕುಮಾರ್ ಅವರ 97ನೇ ಜನ್ಮದಿನಾಚರಣೆಯ ಅಂಗವಾಗಿ ಏ 24ರಂದು ಕಂಠೀರವ ಸ್ಟುಡಿಯೋದ ಆವರಣದಲ್ಲಿ ಗೀತ ಗಾಯನ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇಲ್ಲಿನ ಡಾ.ರಾಜ್‌ಕುಮಾರ್ ಅವರ ಪುಣ್ಯಭೂಮಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಡಾ.ರಾಜಕುಮಾರ್ ಪ್ರತಿಷ್ಠಾನದ ಸಹಯೋಗದಲ್ಲಿ ಗುರುವಾರ ಬೆಳಿಗ್ಗೆ 10:30ಕ್ಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ, ಎಂಎಸ್‌ಎಂಇ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕರಾದ ಕೆ.ಗೋಪಾಲಯ್ಯ ಅವರು ಭಾಗಿಯಾಗಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಂಠೀರವ ಸ್ಟುಡಿಯೋ ಪ್ರೈ.ಲಿ. ಅಧ್ಯಕ್ಷರಾದ ಮಹಬೂಬ್ ಪಾಷಾ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ ಮತ್ತು ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಇರಲಿದ್ದಾರೆ.
ಡಾ.ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಹಾಗೂ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜಕುಮಾರ್ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ್ ಅವರ ಸಮಗ್ರ ಚರಿತ್ರೆಯ ಕೃತಿಕಾರರಾದ ದೊಡ್ಡಹುಲ್ಲೂರು ರುಕ್ಕೋಜಿ ಅವರು ಉಪನ್ಯಾಸ ನೀಡಲಿದ್ದಾರೆ. ವಿಕಾಸ್ ವಸಿಷ್ಠ, ಸ್ಪರ್ಶ ಆರ್. ಕೆ ಹಾಗೂ ತಂಡದವರಿಂದ ಡಾ.ರಾಜಕುಮಾರ್ ಹಾಡಿರುವ ಗೀತೆಗಳ ಗಾಯನ ಇರಲಿದೆ.
For More Updates Join our WhatsApp Group :



