SSLC ಫಲಿತಾಂಶ ಪ್ರಕಟ – ದಾಖಲೆಯ ಸಾಧನೆ

SSLC ಫಲಿತಾಂಶ ಪ್ರಕಟ – ದಾಖಲೆಯ ಸಾಧನೆ

7 ವಿದ್ಯಾರ್ಥಿಗಳು 625ಕ್ಕೆ 625 ಅಂಕ – ದಕ್ಷಿಣ ಕನ್ನಡ ಜಿಲ್ಲೆ ಟಾಪ್

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.

ಎಸ್​ಎಸ್​ಎಲ್​ಸಿ ಫಲಿತಾಂಶ: 7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್

ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ಉಳಿದಂತೆ ಮಂಡ್ಯ 5ನೇ ಸ್ಥಾನ (ಶೇ 97.45), ಶಿರಸಿ 6ನೇ ಸ್ಥಾನ (ಶೇ 97.21), ಹಾವೇರಿ 7ನೇ ಸ್ಥಾನ (ಶೇ 96.87), ಕೊಡಗು 8ನೇ ಸ್ಥಾನ (ಶೇ 96.70), ಶಿವಮೊಗ್ಗ 9ನೇ ಸ್ಥಾನ (ಶೇ 96.56), ವಿಜಯನಗರ 10ನೇ ಸ್ಥಾನ (ಶೇ 96.39), ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ (ಶೇ 95.84), ಧಾರವಾಡ 12ನೇ ಸ್ಥಾನ (ಶೇ 95.59), ಕೋಲಾರ 13ನೇ ಸ್ಥಾನ (ಶೇ 95.50) ಗಳಿಸಿವೆ.

  • ಬಾಗಲಕೋಟೆ 14ನೇ ಸ್ಥಾನ – 95.42%
  • ಬೆಂ.ಉತ್ತರ 15ನೇ ಸ್ಥಾನ – 95.34%
  • ಗದಗ 16ನೇ ಸ್ಥಾನ – 95.24%
  • ಚಿಕ್ಕಮಗಳೂರು 17ನೇ ಸ್ಥಾನ – 94.99%
  • ಬೆಳಗಾವಿ 18ನೇ ಸ್ಥಾನ – 94.75%
  • ದಾವಣಗೆರೆ 19ನೇ ಸ್ಥಾನ – 94.64%
  • ಮೈಸೂರು 20ನೇ ಸ್ಥಾನ – 94.50%
  • ರಾಯಚೂರು 21ನೇ ಸ್ಥಾನ – 94.41%
  • ವಿಜಯಪುರ 22ನೇ ಸ್ಥಾನ – 94.17%
  • ಚಿಕ್ಕೋಡಿ 23ನೇ ಸ್ಥಾನ – 94.09%
  • ಬಳ್ಳಾರಿ 24ನೇ ಸ್ಥಾನ – 93.36%
  • ಕೊಪ್ಪಳ 25ನೇ ಸ್ಥಾನ – ಶೇ.93.10
  • ರಾಮನಗರ 26ನೇ ಸ್ಥಾನ – 92.83%
  • ಚಿತ್ರದುರ್ಗ 27ನೇ ಸ್ಥಾನ – 92.25%
  • ಬೀದರ್ 28ನೇ ಸ್ಥಾನ – 92.18%
  • ತುಮಕೂರು 29ನೇ ಸ್ಥಾನ – 92.04%
  • ಚಾಮರಾಜನಗರ 30ನೇ ಸ್ಥಾನ – 91.89%
  • ಯಾದಗಿರಿ 31ನೇ ಸ್ಥಾನ – 91.89%

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *