ಬಸ್ ನಿಲ್ಲಿಸದ ಪ್ರಶ್ನೆಗೆ ವಿದ್ಯಾರ್ಥಿಗಳ ಮೇಲೆ ಹ* ಆರೋಪ.!

ಬಸ್ ನಿಲ್ಲಿಸದ ಪ್ರಶ್ನೆಗೆ ವಿದ್ಯಾರ್ಥಿಗಳ ಮೇಲೆ ಹ* ಆರೋಪ.!

ಸಾರಿಗೆ ನೌಕರರ ದರ್ಪ ಆರೋಪ – ಬಸ್ ತಡೆದು ವಿದ್ಯಾರ್ಥಿಗಳ ಆಕ್ರೋಶ

ಗದಗ : ಬಸ್ ನಿಲ್ಲಿಸಿ ಅಂದಿದಕ್ಕೆ ವಿದ್ಯಾರ್ಥಿಗಳ‌ ಮೇಲೆ ಸಾರಿಗೆ ನೌಕರರಿಂದ ದರ್ಪ‌‌ ಮೆರೆದ ಘಟನೆಯೊಂದು ಗದಗ ನಗರದ ಪುಟ್ಟರಾಜ್ ಗವಾಯಿಗಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ.

ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಇದನ್ನು ಪ್ರಶ್ನಿಸಲು ಹೋದ ವಿದ್ಯಾರ್ಥಿಗಳು ಮತ್ತು ಸಾರಿಗೆ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ನೌಕರರು ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ ನೌಕರನ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಶಹರ ಪೊಲೀಸ್ ಠಾಣೆ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಲು ಹರಸಹಾಸ ಪಟ್ಟರು. ಬಸ್ ಸಂಚಾರ ಸ್ಥಗಿತ ಹಿನ್ನೆಲೆ ಪ್ರಯಾಣಿಕರು ಪರದಾಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *