ಒಳಮೀಸಲಾತಿ:  ಸಚಿವ ಸಂಪುಟ ಸಭೆಯ  ಐತಿಹಾಸಿಕ ನಿರ್ಧಾರ

ಒಳಮೀಸಲಾತಿ:  ಸಚಿವ ಸಂಪುಟ ಸಭೆಯ  ಐತಿಹಾಸಿಕ ನಿರ್ಧಾರ

ಎಡಗೈ : 5.25%, ಬಲಗೈ: 5.25 % ಹಾಗೂ ಇತರೆ ಸಮುದಾಯಗಳಿಗೆ  4.5% ಮೀಸಲಾತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ.

ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗಧಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ.  ಒಳಮೀಸಲಾತಿಗೆ ರಚಿಸಲಾಗಿದ್ದ  ಕಾಯ್ದೆಗೆ  ಅನುಗುಣವಾಗಿ  17 %  ಮೀಸಲಾತಿಗೆ  6:6:5  ಇದ್ದರೆ, ಇದೀಗ 15 % ಮೀಸಲಾತಿಗೆ    5.3,  5.3 ಹಾಗೂ 4.4   ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು ಎಡಗೈ ಸಂಬಂಧಿತ ಜಾತಿಗಳಿಗೆ  5.25, ಬಲಗೈ ಜಾತಿಗಳಿಗೆ 5.25   ಬೋವಿ , ಲಂಬಾಣಿ, ಕೊರಚ, ಕೊರಮ ಹಾಗೂ 59  ಅಲೆಮಾರಿ ಜಾತಿಗಳು ಸೇರಿ 4.5  ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದರು.

ಎಲ್ಲಾ ಸಮುದಾಯಗಳಿಗೂ ಸಮಾನ ನ್ಯಾಯ ದೊರೆಯಲಿದೆ

ಈ ನಿರ್ಧಾರದಿಂದ ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು  ನೇಮಕಾತಿ ಮಾಡುವ ಸಂದರ್ಭದಲ್ಲಿ ಒಳಮೀಸಲಾತಿಯನ್ನು ಇದರನ್ವಯ ನಿರ್ಧರಿಸಬೇಕು ಎಂದರು.

ಶೇ. ಆರರಷ್ಟು ಮೀಸಲಾತಿಗೆ ಸಂಬಂಧಿಸಿದಂತೆ  ಉಚ್ಛ ನ್ಯಾಯಾಲಯ ಅಂತಿಮವಾಗಿ ತೀರ್ಮಾನ ಕೈಗೊಳ್ಳುವವರೆಗೆ  ಬ್ಯಾಕ್ ಲಾಗ್ ಎಂದು ಪರಿಗಣಿಸಲಾಗುವುದು ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *