ಎನ್ಐಎ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು; 2022ರ ಸ್ಫೋಟ ಪ್ರಕರಣಕ್ಕೆ ಅಂತ್ಯ
ಮಂಗಳೂರು: Mangaluru ನಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. National Investigation Agency ವಿಶೇಷ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಘೋಷಿಸಿ ತೀರ್ಪು ನೀಡಿದೆ.
2022ರ ನವೆಂಬರ್ 19ರಂದು ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಸಾಗಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡು ದೊಡ್ಡ ಅನಾಹುತ ತಪ್ಪಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಗಣಿಸಿ, ಶಾರಿಕ್ ವಿರುದ್ಧ ವಿವಿಧ ಸೆಕ್ಷನ್ಗಳಡಿ ಶಿಕ್ಷೆ ಪ್ರಕಟಿಸಿದೆ.
ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದ ಆರೋಪದ ಹಿನ್ನೆಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಾಗಿತ್ತು.
For More Updates Join our WhatsApp Group :




