IPL ಟಿಕೆಟ್ ಬ್ಲಾಕ್ ದಂಧೆ ಮೇಲೆ ದಾಳಿ.!

IPL ಟಿಕೆಟ್ ಬ್ಲಾಕ್ ದಂಧೆ ಮೇಲೆ ದಾಳಿ.!

ಬೆಂಗಳೂರು ಪೊಲೀಸರ ಕಟ್ಟುನಿಟ್ಟಿನ ಕ್ರಮ.

ಬೆಂಗಳೂರು: ಐಪಿಎಲ್ ಪಂದ್ಯಗಳ ಸಮಯದಲ್ಲಿ ಟಿಕೆಟ್‌ಗಳನ್ನು ಅಕ್ರಮವಾಗಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ದಂಧೆಕೋರರ ಮೇಲೆ ಬೆಂಗಳೂರು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿ, 24 ಮಂದಿಯನ್ನು ಬಂಧಿಸಿದ್ದಾರೆ. ದಂಧೆಯಲ್ಲಿ ಬಳಕೆಯಾಗುತ್ತಿದ್ದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಕ್ರಿಕೆಟ್ ಅಭಿಮಾನಿಗಳ ಆಸೆಯನ್ನು ದುರುಪಯೋಗಪಡಿಸಿಕೊಂಡು ಟಿಕೆಟ್‌ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿತ್ತು. ಈ ಮೂಲಕ ಅಕ್ರಮ ಲಾಭ ಗಳಿಸುವ ಯತ್ನ ನಡೆದಿದೆ.

ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿಯಿಂದ ದಂಧೆಕೋರರನ್ನು ಬಂಧಿಸಲಾಗಿದ್ದು, ಐಪಿಎಲ್ ಟಿಕೆಟ್ ಬ್ಲಾಕ್ ಮಾರ್ಕೆಟ್‌ಗೆ ಬ್ರೇಕ್ ಹಾಕಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *