ಬಳ್ಳಾರಿಯಲ್ಲಿ ಗಾಳಿ ಗುಣಮಟ್ಟ ಗಂಭೀರ: AQI 356ಕ್ಕೆ ಏರಿಕೆ

ಬಳ್ಳಾರಿಯಲ್ಲಿ ಗಾಳಿ ಗುಣಮಟ್ಟ ಗಂಭೀರ: AQI 356ಕ್ಕೆ ಏರಿಕೆ

ರಾಜ್ಯದಲ್ಲೇ ಮೊದಲ ಬಾರಿ ಅಪಾಯಕಾರಿ ಮಟ್ಟ; ಆರೋಗ್ಯದ ಮೇಲೆ ಭಾರೀ ಪರಿಣಾಮದ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಬಳ್ಳಾರಿಯ ವಾಯು ಗುಣಮಟ್ಟ ಏಕಾಏಕಿ 300ರ ಗಡಿ ದಾಟಿದ್ದು, ಇದೇ ಮೊದಲ ಬಾರಿಗೆ ಈ ಮಟ್ಟದಲ್ಲಿ ಹದಗೆಟ್ಟಿದೆ. ಇಷ್ಟು ದಿನ ಗರಿಷ್ಠ 200ಕ್ಕೆ ತಲುಪುತ್ತಿದ್ದ AQI ಇಂದು ಇಷ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹಠಾತ್ತನೆ ಕುಸಿದ AQI

ಬಳ್ಳಾರಿಯಲ್ಲಿ ವಾಯುಮಾಲಿನ್ಯದ ಮಟ್ಟವು ಅತ್ಯಂತ ಅಪಾಯಕಾರಿ ಹಂತಕ್ಕೆ ತಲುಪಿದ್ದು, ವಾಯು ಗುಣಮಟ್ಟ ಸೂಚ್ಯಂಕವು (AQI) 356ಕ್ಕೆ ಏರಿಕೆಯಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಉಸಿರಾಟದ ಸಮಸ್ಯೆ ಇರುವವರು ತೀವ್ರ ಸಂಕಷ್ಟಕ್ಕೆ ಒಳಗಾಗಬಹುದು.

ಗಾಳಿಯಲ್ಲಿನ ವಿಷಕಾರಿ ಅಂಶಗಳು ಶ್ವಾಸಕೋಶದ ಕಾಯಿಲೆಗಳಿಗೆ ದಾರಿಯಾಗುವುದರಿಂದ, ಜನರು ತುರ್ತು ಕೆಲಸಗಳಿಲ್ಲದೆ ಹೊರಬರದಂತೆ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ನಗರದ ಹವಾಮಾನವು ಉಸಿರುಗಟ್ಟಿಸುವಂತಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳ ಅಗತ್ಯವಿದೆ. ಬಳ್ಳಾರಿಯ ಜನತೆ ಈಗ ದೀರ್ಘಕಾಲದ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ಜಾಗ್ರತೆ ವಹಿಸಬೇಕಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ

  • ಬೆಂಗಳೂರು – 141
  • ಮಂಗಳೂರು-118
  • ಮೈಸೂರು – 110
  • ಬೆಳಗಾವಿ – 42
  • ಕಲಬುರ್ಗಿ-116
  • ಶಿವಮೊಗ್ಗ –102
  • ಬಳ್ಳಾರಿ – 356
  • ಹುಬ್ಬಳ್ಳಿ- 67
  • ಉಡುಪಿ –124
  • ವಿಜಯಪುರ – 93

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *