70 ಗ್ರಾಂ ಚಿನ್ನದ ವ್ಯತ್ಯಾಸಕ್ಕೆ ವಧು–ವರರ ಕಡೆಯವರ ನಡುವೆ ಭೀಕರ ಗಲಾಟೆ; FIR ದಾಖಲು
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆರ್‌ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮ ಚಿನ್ನದ ವಿಷಯಕ್ಕೆ ತೀವ್ರ ಗಲಾಟೆಯಾಗಿ ಮಾರ್ಪಟ್ಟಿದೆ. ವಧು–ವರರ ಕಡೆಯವರ ನಡುವೆ ನಡೆದ ಸಂಘರ್ಷದಲ್ಲಿ ಚಾಕು ಇರಿತ ಸೇರಿದಂತೆ ಹಲ್ಲೆ ನಡೆದಿದ್ದು ಹಲವರು ಗಾಯಗೊಂಡಿದ್ದಾರೆ.
ಮುದಾಸಿರ್ ಮತ್ತು ಗುಲ್ನಾಜ್ ಭಾನು ಅವರ ಮದುವೆ ಇಂದು ನಿಗದಿಯಾಗಿತ್ತು. ಆದರೆ ಮಂಗಳವಾರ ನಡೆದ ಅರಿಶಿಣ ಶಾಸ್ತ್ರದ ವೇಳೆ ವರನ ಕಡೆಯವರು ತಡವಾಗಿ ಬಂದಿದ್ದು ವಿವಾದಕ್ಕೆ ಕಾರಣವಾಯಿತು.
ಮರು ಮಾತುಕತೆಗೆ ಬಂದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕೆಲವರು ಚಾಕುವಿನಿಂದ ಇರಿತ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮರ್ಮಾಂಗಕ್ಕೆ ಒದ್ದು ಹಲ್ಲೆ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಗಾಯಗೊಂಡವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಮೈಸೂರು ಮತ್ತು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ . ಘಟನೆ ಕುರಿತು ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
For More Updates Join our WhatsApp Group :




