ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ.!
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ. ಆರೋಗ್ಯ ಇಲಾಖೆಯ RCH ಪೋರ್ಟಲ್ ಈ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ.
ಒಟ್ಟು ಪ್ರಕರಣಗಳಲ್ಲಿ ಕೇವಲ 674 ಪೋಕ್ಸೋ (POCSO) ಕೇಸ್‌ಗಳು ಮಾತ್ರ ದಾಖಲಾಗಿವೆ. ಅನೇಕ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿಲ್ಲ ಎಂಬುದು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
14 ರಿಂದ 18 ವರ್ಷದೊಳಗಿನ ಬಾಲಕಿಯರಲ್ಲಿ ಬಾಲ್ಯ ವಿವಾಹ, ಪ್ರೀತಿ ಸಂಬಂಧಗಳು ಹಾಗೂ ಲೈಂಗಿಕ ದೌರ್ಜನ್ಯ ಪ್ರಮುಖ ಕಾರಣಗಳಾಗಿ ಕಂಡುಬಂದಿವೆ.
ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ನಡೆದ ದಾಳಿಯಲ್ಲಿ 31 ಬಾಲಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್ ನಡೆಸಿರುವುದು ಪತ್ತೆಯಾಗಿದೆ.ಈ ಘಟನೆಯಿಂದ ಜಿಲ್ಲೆಯಲ್ಲಿ ಅಕ್ರಮ ಸ್ಕ್ಯಾನಿಂಗ್ ದಂಧೆ ಆಳವಾಗಿ ಬೇರೂರಿರುವುದು ಬಹಿರಂಗವಾಗಿದೆ.
ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಗಳಿಂದ ಮಂಡ್ಯ ಹಿಂದೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ತನಿಖೆ ಮೈಸೂರಿನವರೆಗೆ ವಿಸ್ತರಿಸಿ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿತ್ತು.ಇದೀಗ ಬಾಲಗರ್ಭಿಣಿಯರ ಸಂಖ್ಯೆ ಏರಿಕೆಯಾಗುತ್ತಿರುವುದು ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಆರೋಗ್ಯದ ದೃಷ್ಟಿಯಿಂದ ದೊಡ್ಡ ಸವಾಲಾಗಿ ಪರಿಣಮಿಸಿದೆ.
For More Updates Join our WhatsApp Group :




