ಸಿಎಂ ಸಿದ್ದರಾಮಯ್ಯ ಕುರ್ಚಿ ಬಗ್ಗೆ ಅನುಮಾನ—ರಾಜ್ಯದಲ್ಲಿ ದೊಡ್ಡ ಬದಲಾವಣೆ ಸೂಚನೆ.
ಹಾವೇರಿ: ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಬಹುದು ಎಂದು ಹೇಳಿಕೆ ನೀಡಿದ್ದಾರೆ. “ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಯಾವ ಬದಲಾವಣೆ ಆಗಲಿದೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ” ಎಂದು ಬೊಮ್ಮಾಯಿ ಹೇಳಿದರು.
ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಅವರು, “ಸರ್ಕಾರ ಜನರ ಪಾಲಿಗೆ ಸತ್ತಿದೆ. ಮಳೆಗಾಲದ ಸಿದ್ಧತೆಗೂ ಸರ್ಕಾರ ವಿಫಲವಾಗಿದೆ” ಎಂದು ಆರೋಪಿಸಿದರು.ಭಾರಿ ಮಳೆಯಿಂದ ಸಂಭವಿಸಿದ ಅನಾಹುತಗಳಿಗೆ ಸರ್ಕಾರದ ನಿರ್ಲಕ್ಷ್ಯ ಕಾರಣ ಎಂದು ಅವರು ಹೇಳಿದರು. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ತಯಾರಿ ಇರಲಿಲ್ಲ ಎಂದು ಕಿಡಿಕಾರಿದರು.ಪಂಚರಾಜ್ಯ ಚುನಾವಣೆಗಳ ಎಕ್ಸಿಟ್ ಪೋಲ್‌ಗಳನ್ನು ಉಲ್ಲೇಖಿಸಿದ ಬೊಮ್ಮಾಯಿ, ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಎಸ್ ಯಡಿಯೂರಪ್ಪ ಅಭಿಮಾನೋತ್ಸವದ ಮೂಲಕ ರಾಜ್ಯಾದ್ಯಂತ ಬಿಜೆಪಿ ಶಕ್ತಿ ಪ್ರದರ್ಶನವಾಗಲಿದೆ ಎಂದು ಅವರು ಹೇಳಿದರು. ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಬೊಮ್ಮಾಯಿ ಪುನರುಚ್ಚರಿಸಿದರು.
For More Updates Join our WhatsApp Group :




