ಕರ್ನಾಟಕ ಹವಾಮಾನ ಎಚ್ಚರಿಕೆ.!

ಕರ್ನಾಟಕ ಹವಾಮಾನ ಎಚ್ಚರಿಕೆ.!

ರಾಜ್ಯದ ಹಲವೆಡೆ ಆಲಿಕಲ್ಲು ಮಳೆ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು:  ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳಿಂದ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಲಬುರಗಿ ಮತ್ತು ರಾಯಚೂರಿನಲ್ಲಿ ಗರಿಷ್ಠ 42°C ವರೆಗೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಅವಘಡಗಳು ಸಂಭವಿಸಿದ್ದು, ಜೆ.ಪಿ. ನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ್ದಾನೆ.ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತದಿಂದ 7 ಮಂದಿ ಮೃತಪಟ್ಟ ಘಟನೆ ಕೂಡ ವರದಿಯಾಗಿದೆ.ರಾಜ್ಯದಲ್ಲಿ ಮುಂದಿನ ಮೂರು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *