ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಆತ್ಮ*ತ್ಯೆ, ಬೇರೆಡೆ ರಸ್ತೆ ಅಪಘಾತದಲ್ಲಿ ಬಾಲಕ ಸಾ*.
ಬೆಂಗಳೂರು : ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಎ.ಪಿ. ಆದಿತ್ಯ (19) ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. 2ನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಆದಿತ್ಯ ಏಪ್ರಿಲ್ 29ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಲೇಜು ಆಡಳಿತದಿಂದ ಮಾನಸಿಕ ಕಿರುಕುಳಕ್ಕೊಳಗಾಗಿದ್ದಾನೆಂದು ಕುಟುಂಬದವರು ಆರೋಪಿಸಿದ್ದಾರೆ.ಮಾದಕವಸ್ತು ಸೇವನೆ ಪ್ರಕರಣದಲ್ಲಿ ಮಗನನ್ನು ಸಿಲುಕಿಸಿ, ವಿದ್ಯಾರ್ಥಿಗಳ ಮುಂದೆ ಅವಮಾನಿಸಿ ಮಾನಸಿಕ ಒತ್ತಡ ನೀಡಲಾಗಿದೆ ಎಂದು ತಂದೆ ಪ್ರದೀಪ್ ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ವರುಣ್ (15) ಎಂಬ ಬಾಲಕ ಮೃತಪಟ್ಟಿದ್ದಾನೆ.ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಣ್ಣೂರು ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಂದೇ ದಿನ ಎರಡು ದುರಂತಗಳು ಸಂಭವಿಸಿರುವುದು ಬೆಂಗಳೂರಿನಲ್ಲಿ ಆತಂಕ ಮೂಡಿಸಿದೆ.
For More Updates Join our WhatsApp Group :




