ಖಾಸಗಿ ಬಸ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. 9ನೇ ತರಗತಿ ಪಾಸ್ ಆಗಿದ್ದ ವರುಣ್ (15) ಮೃತ ಬಾಲಕ.ಮನೆಯಿಂದ ಅಂಗಡಿಗೆ ಹೋಗುತ್ತಿದ್ದಾಗ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ವರುಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಆಗಮಿಸಿದ ಹೆಣ್ಣೂರು ಸಂಚಾರಿ ಪೊಲೀಸರು ಬಸ್ ಹಾಗೂ ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
For More Updates Join our WhatsApp Group :




