ನವಿಲುಗಳ ಸಾವಿನ ಬಳಿಕಈಗ ಕೋಳಿಗಳಸ ರಣಿಸಾ*.
ತುಮಕೂರು : ಜಿಲ್ಲೆಯಲ್ಲಿ ಹಕ್ಕಿಜ್ವರದ ಭೀತಿ ದಿನೇ ದಿನೇ ಗಂಭೀರವಾಗುತ್ತಿದೆ. ನವಿಲುಗಳ ಸರಣಿ ಸಾವಿನ ಬೆನ್ನಲ್ಲೇ ಇದೀಗ ಕೋಳಿಗಳ ಸಾವೂ ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.ಬೊಮ್ಮನಹಳ್ಳಿ ಗ್ರಾಮದಲ್ಲಿರುವ ಕೋಳಿ ಫಾರಂನಲ್ಲಿ ಏಕಾಏಕಿ ಸುಮಾರು 30 ಕೋಳಿಗಳು ಸಾವನ್ನಪ್ಪಿವೆ. ಸಾವಿನ ನಿಖರ ಕಾರಣ ತಿಳಿಯಲು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಏಪ್ರಿಲ್ 16ರಿಂದ ಆರಂಭವಾದ ನವಿಲುಗಳ ಸಾವಿನಲ್ಲಿ 11 ದಿನಗಳಲ್ಲಿ 44 ನವಿಲುಗಳು ಮೃತಪಟ್ಟಿದ್ದವು. ಬಳಿಕ ಬಂದ ವರದಿಯಲ್ಲಿ ಹಕ್ಕಿಜ್ವರವೇ ಕಾರಣ ಎಂಬುದು ದೃಢಪಟ್ಟಿದೆ. ಪಶು ಸಂಗೋಪನಾ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಸೋಂಕು ಹರಡುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ಕ್ರಮ ಕೈಗೊಳ್ಳಲಾಗಿದೆ.
ಕಲ್ಲಳ್ಳಿ, ಕೋಡಿಹಳ್ಳಿ, ಹುಣ್ಣೆನಹಳ್ಳಿ, ಬೊಮ್ಮನಹಳ್ಳಿ ಮತ್ತು ಬೈರಸಂದ್ರ ಪ್ರದೇಶಗಳನ್ನು ಕಂಟೋನ್ಮೆಂಟ್ ಜೋನ್ ಆಗಿ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಚಿಕನ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಲಾಗಿದೆ.ಯಾವುದೇ ಕೋಳಿ ಸಾವು ಕಂಡುಬಂದರೆ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಆತಂಕ ಬೇಡ, ಆದರೆ ಮುನ್ನೆಚ್ಚರಿಕೆ ಅಗತ್ಯ ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
For More Updates Join our WhatsApp Group :




