ವಿದ್ಯುತ್ ವ್ಯತ್ಯಯದಿಂದ ಸೇವೆ ಸ್ಥಗಿತ.!
ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದ ಪ್ರಮುಖ ನಿಲ್ದಾಣವಾದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ಯಾವುದೇ ರೈಲುಗಳು ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ನಿಲ್ಲುವುದಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಬದಲಿ ಯೋಜನೆಯಂತೆ ರೂಪಿಸಿಕೊಳ್ಳುವಂತೆ ಸೂಚಿಸಲಾಗಿದೆ.
ವಿದ್ಯುತ್ ಪೂರೈಕೆ ಸಹಜ ಸ್ಥಿತಿಗೆ ಬಂದ ತಕ್ಷಣ ನಿಲ್ದಾಣದ ಕಾರ್ಯಾಚರಣೆ ಪುನರಾರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ವಾರದ ಆರಂಭದ ದಿನವೇ ಸೇವೆ ಸ್ಥಗಿತಗೊಂಡಿರುವುದರಿಂದ ಕಚೇರಿ ಉದ್ಯೋಗಿಗಳು ಹಾಗೂ ಸಾರ್ವಜನಿಕರು ಸ್ವಲ್ಪ ಮಟ್ಟಿನ ಅಡಚಣೆಯನ್ನು ಎದುರಿಸಿದ್ದಾರೆ. ಸಂಸ್ಥೆ ಈ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
For More Updates Join our WhatsApp Group :




