ಜೋಕಾಲಿ ಕಳಚಿ 20ಕ್ಕೂ ಹೆಚ್ಚು ಜನರಿಗೆ ಗಾಯ.!
ಗದಗ : ಜಿಲ್ಲೆಯ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೈ ಜೋಕಾಲಿ ಏಕಾಏಕಿ ಕಳಚಿ ಬಿದ್ದ ಘಟನೆ ಆತಂಕ ಮೂಡಿಸಿದೆ. ಈ ಅವಘಡದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಬ್ರೇಕ್ ಡ್ಯಾನ್ಸ್ ರೈಡ್ ನಡೆಸುತ್ತಿದ್ದ ವೇಳೆ ತೊಟ್ಟಿಲುಗಳು ಕಳಚಿ ಬಿದ್ದು ಮಕ್ಕಳು, ಮಹಿಳೆಯರು ಹಾಗೂ ಪುರುಷರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ತಕ್ಷಣ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಜೋಕಾಲಿಯ ಅಳವಡಿಕೆ ಕಳಪೆ ಗುಣಮಟ್ಟದ್ದಾಗಿತ್ತು ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ.ಘಟನೆಯ ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.
For More Updates Join our WhatsApp Group :



