ಮಳೆ ಅಲರ್ಟ್: ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ.!

ಮಳೆ ಅಲರ್ಟ್: ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ.!

ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮಳೆ ಸದ್ದು.!

ಬೆಂಗಳೂರು: ಸೋಮವಾರ ಬೆಳಂಬೆಳಿಗ್ಗೆಯೇ ಬೆಂಗಳೂರಿನ ಕೆಲವೆಡೆ ಜೋರು ಮಳೆ ಸುರಿದಿದೆ. ಅಲ್ಲದೆ ರಾಜ್ಯದಾದ್ಯಂತ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿದ ಕೆಲ ಭಾಗದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.ಹವಾಮಾನ ಇಲಾಖೆ ಹೇಳಿರುವಂತೆ, ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.

ಯಾವ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ?

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಕೆಲಭಾಗದಲ್ಲಿ ಗಾಳಿ ಸಹಿತ ಮಳೆ ಸುರಿಯಲಿದೆ.

ಇದರ ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯ ಕೆಲ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 3 ಮಿಮೀ -15 ಮಿಮೀ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಇಂದು ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದೆ. ಇಂದಿನ ಗರಿಷ್ಠ ತಾಪಮಾನ ಸುಮಾರು 33 ಡಿಗ್ರಿಯಿಂದ 35ಡಿಗ್ರಿ ವರೆಗೆ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *