ರಾಜ್ಯ ಉಪಚುನಾವಣೆ ಗೆಲುವು ಗ್ಯಾರಂಟಿ ಯೋಜನೆಗಳಿಗೆ ಸಿಕ್ಕ ಮನ್ನಣೆ
ಮಡಿಕೇರಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಬಹುಮತ ಸಾಧಿಸಿದ್ದು, ಇದು ನಾವು ನಿರೀಕ್ಷಿಸಿದ ಫಲಿತಾಂಶವೇ ಆಗಿದೆ *ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶವು ಆಡಳಿತ ವಿರೋಧಿ ಅಲೆ ಹಾಗೂ ಕಾಂಗ್ರೆಸ್ ನಾಯಕರ ಮೇಲಿನ ಜನರ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದರು.ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಎರಡು ವಾರಗಳ ಕಾಲ ಎರಡು ಜಿಲ್ಲೆಗಳ ಉಸ್ತುವಾರಿಯನ್ನು ತಾವು ವಹಿಸಿಕೊಂಡಿದ್ದಾಗಿ ಸ್ಮರಿಸಿದ ಸಚಿವರು,
“ನಾವು ಪ್ರಚಾರ ಮಾಡುವಾಗಲೇ ಜನರ ಒಲವು ಕಾಂಗ್ರೆಸ್ ಪಕ್ಷದ ಪರವಾಗಿರುವುದು ಸ್ಪಷ್ಟವಾಗಿತ್ತು. ಹಿಂದಿನ ಮುಖ್ಯಮಂತ್ರಿಗಳ ಹಾಗೂ ಸರ್ಕಾರದ ಆಡಳಿತ ವೈಖರಿಯ ವಿರುದ್ಧ ಜನರು ಸಂಪೂರ್ಣವಾಗಿ ತಿರುಗಿಬಿದ್ದಿದ್ದರು. ಈ ಆಡಳಿತ ವಿರೋಧಿ ಅಲೆಯನ್ನು ನಾವು ಮೊದಲೇ ಗ್ರಹಿಸಿದ್ದೆವು,” ಎಂದು ಹೇಳಿದರು.
ಇದೇ ವೇಳೆ ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಉಪಚುನಾವಣೆಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, “ರಾಜ್ಯದಲ್ಲಿ ಎರಡು ಉಪಚುನಾವಣೆಗಳಲ್ಲಿ ನಮ್ಮ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಇದು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳಿಗೆ ಜನತೆ ನೀಡಿರುವ ಸ್ಪಷ್ಟ ಮನ್ನಣೆ ಮತ್ತು ಆಶೀರ್ವಾದವಾಗಿದೆ,” ಎಂದು ಸಂತಸ ವ್ಯಕ್ತಪಡಿಸಿದರು.
For More Updates Join our WhatsApp Group :




