ಪೀಣ್ಯ ಎಲಿವೇಟೆಡ್ ಫ್ಲೈಓವರ್ 4 ದಿನ ಬಂದ್..!

ಕೇಬಲ್ ದುರಸ್ತಿ, ಲೋಡ್ ಟೆಸ್ಟ್ ಹಿನ್ನೆಲೆ ಸಂಚಾರ ನಿರ್ಬಂಧ; ಪ್ರಯಾಣಿಕರಿಗೆ ತೊಂದರೆ.!

ಬೆಂಗಳೂರು: ಪೀಣ್ಯ ಎಲಿವೇಟೆಡ್ ಫ್ಲೈಓವರ್ ಅನ್ನು ಇಂದಿನಿಂದ ಮೇ 8ರವರೆಗೆ ನಾಲ್ಕು ದಿನಗಳ ಕಾಲ ಬಂದ್ ಮಾಡಲಾಗಿದೆ. ಕೇಬಲ್ ಅಳವಡಿಕೆ ದುರಸ್ತಿ ಹಾಗೂ ಲೋಡ್ ಟೆಸ್ಟಿಂಗ್ ಕಾರ್ಯಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ಲೈಓವರ್ ಬಂದ್ ಪರಿಣಾಮ ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಗೊರಗುಂಟೆಪಾಳ್ಯವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ಸಂಪೂರ್ಣ ನಿಧಾನವಾಗಿದೆ. ಪ್ರಯಾಣಿಕರು ತಮ್ಮ ಗಮ್ಯಸ್ಥಾನ ತಲುಪಲು ಗಂಟೆಗಳ ಕಾಲ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಸಂಚಾರ ದಟ್ಟಣೆಯಿಂದಾಗಿ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗಿದ್ದು, ಅಧಿಕಾರಿಗಳು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಿದ್ದಾರೆ. ಈ ನಾಲ್ಕು ದಿನಗಳ ನಿರ್ಬಂಧದಿಂದ ಪೀಣ್ಯ–ತುಮಕೂರು ರಸ್ತೆ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮತ್ತಷ್ಟು ಸಂಕೀರ್ಣವಾಗುವ ಸಾಧ್ಯತೆ ಇದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *