ಕಪ್ಪು ಸ್ಟಿಕ್ಕರ್ ಹಾಕಿ ಗುರುತು ಮರೆಮಾಚಿ ಜಾನುವಾರು ಕಳ್ಳತನ ಮಾಡುತ್ತಿದ್ದ ಗ್ಯಾಂಗ್.!
ಹುಬ್ಬಳ್ಳಿ: ನಗರದಲ್ಲಿ ಐಷಾರಾಮಿ ಕಾರುಗಳನ್ನು ಬಳಸಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮುಬಾರಕ್ ಹಾಗೂ ಆತನ ಇಬ್ಬರು ಸಹಚರರು ಬಂಧಿತರಾಗಿದ್ದಾರೆ.
ಆರೋಪಿಗಳು ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್ಮೆಂಟ್ ಮತ್ತು ಹಳೇ ಹುಬ್ಬಳ್ಳಿ ಭಾಗಗಳಲ್ಲಿ ಈ ಗ್ಯಾಂಗ್ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿತ್ತು. ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
For More Updates Join our WhatsApp Group :




