ಪಾಲಿಕೆ ಕಾಲೇಜು ವಿದ್ಯಾರ್ಥಿಗಳಿಗೆ ರೂ.35 ಸಾವಿರ ಬಹುಮಾನ: ಪ್ರತಿಭಾವಂತರಿಗೆ ಗೌರವ.!

ಪಾಲಿಕೆ ಕಾಲೇಜು ವಿದ್ಯಾರ್ಥಿಗಳಿಗೆ ರೂ.35 ಸಾವಿರ ಬಹುಮಾನ: ಪ್ರತಿಭಾವಂತರಿಗೆ ಗೌರವ.!

ಉತ್ತರಹಳ್ಳಿ ಪಿಯು ಕಾಲೇಜಿನ ಸಾಧನೆಗೆ ಸನ್ಮಾನ: 8 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ

ಬೆಂಗಳೂರು : ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಉತ್ತರಹಳ್ಳಿ ಪದವಿ ಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತಲಾ ರೂ.35,000 ನಗದು ಪುರಸ್ಕಾರ ನೀಡಿ ಗೌರವಿಸಲಾಗಿದೆ. ಜಯನಗರದಲ್ಲಿರುವ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಎಂಟು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗದ ಪ್ರತೀಕ್ ಪಿ. 97.50% ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ಗಮನಸೆಳೆದಿದ್ದಾರೆ. ಇತರ ವಿದ್ಯಾರ್ಥಿಗಳಾದ ಈರೇಶ್ ಎಸ್., ವೀಣಾ ವಿ., ಪ್ರೀತಿ ವಿ.ಎಸ್., ವಿವೇಕ್, ನಂದಿತಾ ಕೆ., ತೇಜಸ್ ಎಂ.ಪಿ. ಹಾಗೂ ಮಂಜುನಾಥ ಭಂಗಿ ತಮ್ಮ ತಮ್ಮ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಕಾಲೇಜಿನ ಪ್ರಾಂಶುಪಾಲೆ ಸರಸ್ವತಿ ನಾಯಕ್ ಮಾತನಾಡಿ, ಒಟ್ಟು 134 ವಿದ್ಯಾರ್ಥಿಗಳಲ್ಲಿ 99 ಮಂದಿ ಉತ್ತೀರ್ಣರಾಗಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಬಡ ಕುಟುಂಬಗಳ ಹಿನ್ನೆಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ವಿಶೇಷ ಎಂದರು.

ಈ ಸಂದರ್ಭದಲ್ಲಿ ಆಯುಕ್ತ ರಮೇಶ್, ಭಾರತದ ಮಾಜಿ ರಾಷ್ಟ್ರಪತಿ ಕೆ.ಆರ್. ನಾರಾಯಣ್ ಅವರ ಜೀವನವನ್ನು ಉದಾಹರಣೆಯಾಗಿ ನೀಡುತ್ತಾ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಪಾಲಿಕೆ ಶಿಕ್ಷಣಕ್ಕೆ ಅಗತ್ಯವಾದ ಎಲ್ಲ ಸಹಾಯ ನೀಡುವುದಾಗಿ ಭರವಸೆ ನೀಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *