ವೃಷಭಾವತಿ ವ್ಯಾಲಿಗೆ ವೈಜ್ಞಾನಿಕ ನೀರು ಹರಿವು ಯೋಜನೆ: ಡಾ. ರಾಜೇಂದ್ರ K.V ಸೂಚನೆ

ವೃಷಭಾವತಿ ವ್ಯಾಲಿಗೆ ವೈಜ್ಞಾನಿಕ ನೀರು ಹರಿವು ಯೋಜನೆ: ಡಾ. ರಾಜೇಂದ್ರ K.V ಸೂಚನೆ

ಮಳೆಗಾಲ ಮುನ್ನವೇ ಎಚ್ಚರಿಕೆ ಕ್ರಮ: ವೃಷಭಾವತಿ ವ್ಯಾಲಿ ಸ್ವಚ್ಛತೆಗೆ ತ್ವರಿತ ಕಾರ್ಯ

ಬೆಂಗಳೂರು: ವೃಷಭಾವತಿ ವ್ಯಾಲಿಯಲ್ಲಿ ಸರಾಗವಾಗಿ ನೀರು ಹರಿದುಹೋಗಲು ವೈಜ್ಞಾನಿಕ ಯೋಜನೆ ರೂಪಿಸಲು ಪಶ್ಚಿಮ ನಗರ ಪಾಲಿಕೆ *ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿಜಯನಗರ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಗಾಳಿ ಆಂಜನೇಯ ದೇವಸ್ಥಾನದ ಬಳಿ ವೃಷಭಾವತಿ ವ್ಯಾಲಿಯನ್ನು ಪರಿಶೀಲಿಸಿ ಹೂಳು, ತ್ಯಾಜ್ಯವನ್ನು ತಕ್ಷಣ ಸ್ವಚ್ಛಗೊಳಿಸಿ ಮಳೆ‌ ನೀರು ಸರಾಗವಾಗಿ ಹರಿದುಹೋಗಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದ ವೇಳೆ ಗಾಳಿ ಆಂಜನೇಯ ದೇವಸ್ಥಾನದ ಬಳಿ ವೃಷಭಾವತಿ ವ್ಯಾಲಿಯಲ್ಲಿ ನೀರಿನ‌ ಹರಿವಿನ ಮಟ್ಟ ಹೆಚ್ಚಾಗಿ ಜಲಾವೃತ ಆಗುವುದನ್ನು ತಪ್ಪಿಸುವ ಸಲುವಾಗಿ, ವ್ಯಾಲಿಯನ್ನು ನಿರಂತರವಾಗಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ವ್ಯಾಲಿಗೆ ತ್ಯಾಜ್ಯ ಹಾಕದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಕವಿಕಾ ಫ್ಯಾಕ್ಟರಿ ಹಿಂಭಾಗ ವೃಷಭಾವತಿ ವ್ಯಾಲಿಯಲ್ಲಿ ಹೂಳೆತ್ತುವ ಕಾರ್ಯವನ್ನು ಪರಿವೀಕ್ಷಿಸಿ, ಮುಂಗಾರು ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಕೆಲಸ ಪೂರ್ಣಗೊಳಿಸಲು ಸೂಚನೆ ನೀಡಿದರು.

*ಅಗತ್ಯವಿದ್ದಲ್ಲಿ ಸ್ವಚ್ಛತೆಗಾಗಿ ಹೆಚ್ಚುವರಿ ತಂಡಗಳನ್ನು ನಿಯೋಜಿಸಿಕೊಳ್ಳಿ:*

ಮಳೆಗಾಲದ ವೇಳೆ ಗಾಳಿ ಆಂಜನೇಯ ದೇವಸ್ಥಾನ, ಕವಿಕಾ ಹಾಗೂ ನಾಯಂಡ ಹಳ್ಳಿ ಜಂಕ್ಷನ್ ಭಾಗದಲ್ಲಿ ಜಲಾವೃತ ಆಗುವುದನ್ನು ತಪ್ಪಿಸುವ ಸಲುವಾಗಿ ಹೆಚ್ಚುವರಿ ಯಂತ್ರೋಪಕರಣಗಳನ್ನು ಬಳಸಿಕೊಂಡು ನಿರಂತರವಾಗಿ ಸ್ವಚ್ಛತಾ ಕಾರ್ಯ ನಡೆಸಬೇಕು. ಅಗತ್ಯವಿದ್ದಲ್ಲಿ ಸ್ವಚ್ಛತೆಗಾಗಿ ಹೆಚ್ಚುವರಿ ತಂಡಗಳನ್ನು ನಿಯೋಜಿಸಿಕೊಳ್ಳಲು ಸೂಚನೆ ನೀಡಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *