ಬೆಲೆ ಏರಿಕೆ ವಿರುದ್ಧ KRS ಪಕ್ಷದ ಪ್ರತಿಭಟನೆ: ಫ್ರೀಡಂ ಪಾರ್ಕ್‌ನಲ್ಲಿ ಆಕ್ರೋಶ.!

ಬೆಲೆ ಏರಿಕೆ ವಿರುದ್ಧ KRS ಪಕ್ಷದ ಪ್ರತಿಭಟನೆ: ಫ್ರೀಡಂ ಪಾರ್ಕ್‌ನಲ್ಲಿ ಆಕ್ರೋಶ.!

ಗ್ಯಾಸ್–ವಿದ್ಯುತ್ ದರ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ: ಸರ್ಕಾರಕ್ಕೆ ಟೀಕೆ

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯ ಅಬ್ಬರ ಮುಗಿದು ತಕ್ಷಣವೇ, ಜನಸಾಮಾನ್ಯರಿಗೆ ಆಡಳಿತಾರೂಢ ಸರ್ಕಾರಗಳು ‘ಬೆಲೆ ಏರಿಕೆ’ಯ ಶಾಕ್ ನೀಡಿರುವುದು ಖಂಡನೀಯ. ಈ ಜನವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ ಅವರು, ದೇಶದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ ಹಾಗೂ ದಿಢೀರ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ, ಸಣ್ಣ ಕೈಗಾರಿಕೆಗಳು ಮತ್ತು ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿರುವುದನ್ನು ತೀವ್ರವಾಗಿ ಖಂಡಿಸಿದರು.

“ಯುದ್ಧ ಪರಿಸ್ಥಿತಿ ಮತ್ತು ಸರಬರಾಜು ಸಮಸ್ಯೆಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾದರೂ, ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಸುಳ್ಳು ಭರವಸೆ ನೀಡುತ್ತಾ ಜನರನ್ನು ದಾರಿ ತಪ್ಪಿಸಿ, ಈಗ ಏಕಾಎಕಿ ವಾಣಿಜ್ಯ ಗ್ಯಾಸ್ ಸಿಲೆಂಡರ್’ಗಳ ಬೆಲೆ ಏರಿಸಿದ್ದಾರೆ” ಎಂದು ಆರೋಪಿಸಿದರು. “ಸರ್ಕಾರ ನಿಗದಿಪಡಿಸಿದ ದರದಲ್ಲಿ ಎಲ್ಲಿಯೂ ವಾಣಿಜ್ಯ ಸಿಲಿಂಡರ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೋಟೆಲ್ ಮಾಲೀಕರು ಹಾಗೂ ಸಣ್ಣ ವ್ಯಾಪಾರಸ್ಥರು ಅನಿವಾರ್ಯವಾಗಿ ಕಾಳಸಂತೆಯಲ್ಲಿ ₹3,000 ರಿಂದ ₹5,000 ಹೆಚ್ಚುವರಿಯಾಗಿ ನೀಡಿ ಸಿಲಿಂಡರ್ ಖರೀದಿಸುವಂತಾಗಿದೆ. ಸರ್ಕಾರವೇ ವಾಣಿಜ್ಯ ಸಿಲಿಂಡರ್ ದರವನ್ನು ₹3,154ಕ್ಕೆ ಏರಿಸಿದ್ದು, ಕಾಳಸಂತೆಯಲ್ಲಿ ಅದು ₹6,000 ರಿಂದ ₹8,000ವರೆಗೆ ತಲುಪಿದೆ.

ರಾಜ್ಯ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ ಎಸ್, ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯ ಸ್ವಾಮಿ,ರಘು ನಂದನ, ಆನಂದ್, ಅಕ್ಷಯ್ ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷರಾದ ದೇವರಾಜ ಆರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಧನಂಜಯ ಎಮ್,  ಪದಾಧಿಕಾರಿಗಳಾದ ರಾಮ ರೆಡ್ಡಿ,ಲೋಕೇಶ್, ಶ್ರೀನಿವಾಸನ್, ವೆಂಕಟೇಶ್, ಮೇರಿ, ಅಂಜಲಿ, ಸತೀಶ್, ಪುಷ್ಪ, ಆಶಾ, ಸದಾಮ್, ಮೊಹಮ್ಮದ್ ಆಶಾಮ್, ಜಯಪ್ಪ ರೆಡ್ಡಿ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *