ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಸುರಕ್ಷಿತ ರಕ್ಷಣೆ.!

ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಸುರಕ್ಷಿತ ರಕ್ಷಣೆ.!

ಚಿಕ್ಕಮಗಳೂರಿನಲ್ಲಿ ಖಾಕಿ ಯಶಸ್ಸು: ಕಾಫಿ ಎಸ್ಟೇಟ್‌ನಲ್ಲಿ ಮಗು ಪತ್ತೆ, ಕುಟುಂಬಕ್ಕೆ ನಿಟ್ಟುಸಿರು

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಕಾಫಿ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ 1.5 ವರ್ಷದ ಗಂಡು ಮಗುವನ್ನು 12 ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಪೊಲೀಸರು ಸುರಕ್ಷಿತವಾಗಿ ಪತ್ತೆ ಮಾಡಿದ್ದಾರೆ. ಮಧ್ಯಪ್ರದೇಶ ಮೂಲದ ಗೋನು, ಸೋನು ದಂಪತಿಯ ಮಗು ನಿನ್ನೆ ಸಂಜೆ ಕಾಫಿ ಎಸ್ಟೇಟ್‌ನಲ್ಲಿ ಆಟವಾಡುತ್ತಿದ್ದ ವೇಳೆ ಕಣ್ಮರೆಯಾಗಿತ್ತು. ಘಟನೆಯ ನಂತರ ಸ್ಥಳೀಯರು ಹಾಗೂ ಪೊಲೀಸರು ಸೇರಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದರು.

ಮೂಡಿಗೆರೆ ಸಿಪಿಐ ಹಾಗೂ ಬಾಳೂರು ಪೊಲೀಸ್ ಠಾಣೆ ಪಿಎಸ್ಐ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆಯಿತು. ಕಾಫಿ ತೋಟದ ದಟ್ಟ ಪ್ರದೇಶಗಳಲ್ಲಿ ರಾತ್ರಿ ಪೂರ್ತಿ ಹುಡುಕಾಟ ನಡೆಸಿದ ಬಳಿಕ ಇಂದು ಬೆಳಗ್ಗೆ ಮಗು ತೋಟದೊಳಗಿನ ಭಾಗದಲ್ಲಿ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ಹಾನಿಯಾಗಿಲ್ಲ.

ಮಗುವನ್ನು ಪತ್ತೆಹಚ್ಚುತ್ತಿದ್ದಂತೆಯೇ ಪೊಲೀಸರು ತಕ್ಷಣವೇ ಹೆತ್ತವರಿಗೆ ಹಸ್ತಾಂತರಿಸಿದ್ದು, ಕುಟುಂಬದವರು ಹಾಗೂ ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಖಾಕಿ ಪಡೆಗಳ ತ್ವರಿತ ಕಾರ್ಯಾಚರಣೆಗೆ ಮೆಚ್ಚುಗೆ ತಂದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *