44 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್: ಆಟೋ ಚಾಲಕನಿಗೆ ₹23,500 ದಂಡ!

44 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್: ಆಟೋ ಚಾಲಕನಿಗೆ ₹23,500 ದಂಡ!

ಸಿಗ್ನಲ್ ಜಂಪ್‌ನಿಂದ ಮೊಬೈಲ್ ಬಳಕೆವರೆಗೆ: ಕಲಬುರಗಿಯಲ್ಲಿ ಆಟೋ ಜಪ್ತಿ.!

ಕಲಬುರಗಿ: ಕಲಬುರಗಿಯಲ್ಲಿ ಸಂಚಾರ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸಿದ್ದ ಆಟೋ ಚಾಲಕನ ವಿರುದ್ಧ ಸಂಚಾರಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಹಬಾದ್ ಪಟ್ಟಣದ ನಿವಾಸಿಯಾಗಿರುವ ಆಟೋ ಚಾಲಕನು ಸಿಗ್ನಲ್ ಜಂಪ್, ನೋ ಪಾರ್ಕಿಂಗ್, ಚಾಲನೆ ವೇಳೆ ಮೊಬೈಲ್ ಬಳಕೆ ಸೇರಿದಂತೆ ಒಟ್ಟು 44 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಸಂಚಾರಿ ಠಾಣೆ-2 ಪೊಲೀಸರು ಚಾಲಕನಿಗೆ ₹23,500 ದಂಡ ವಿಧಿಸಿ ಆಟೋವನ್ನು ಜಪ್ತಿ ಮಾಡಿದ್ದಾರೆ.

ಇ-ಚಲನ್ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಯಮ ಉಲ್ಲಂಘನೆಗಳ ದಾಖಲೆಗಳನ್ನು ಸಂಗ್ರಹಿಸಿದ ಪೊಲೀಸರು ಬಳಿಕ ವಾಹನವನ್ನು ಪತ್ತೆಹಚ್ಚಿ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ಟ್ರಾಫಿಕ್ ನಿಯಮ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲೂ ರೀಲ್ಸ್ ಮಾಡುವ ಭರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಯುವಕರಿಗೆ ಪೊಲೀಸರು ದಂಡ ವಿಧಿಸಿದ್ದರು. ಹೆಲ್ಮೆಟ್ ಇಲ್ಲದೆ ಟ್ರಿಪಲ್ ರೈಡ್ ಮಾಡಿ ವೈರಲ್ ವಿಡಿಯೋ ಮಾಡಿದ್ದ ಯುವಕರ ವಿರುದ್ಧ ಕ್ರಮ ಜರುಗಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಲು ರಸ್ತೆ ಸುರಕ್ಷತೆಯನ್ನು ಕಡೆಗಣಿಸುವ ಪ್ರವೃತ್ತಿ ಹೆಚ್ಚುತ್ತಿರುವುದಕ್ಕೆ ಪೊಲೀಸರು ಕಳವಳ ವ್ಯಕ್ತಪಡಿಸಿದ್ದಾರೆ.

ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತಗಳನ್ನು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *