ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಿಂದ ಸಾರಕ್ಕಿ ಕೆರೆ ಸಮಸ್ಯೆಗಳ ತುರ್ತು ಪರಿಹಾರಕ್ಕೆ ಸೂಚನೆ.!
ಬೆಂಗಳೂರು: ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ ಶ್ರೀ ರಮೇಶ್ ಅವರು ನಿನ್ನೆ ಸಾರಕ್ಕಿ ಕೆರೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಸುದೀರ್ಘ ಪಾದಯಾತ್ರೆ ಮತ್ತು ಸ್ಥಳ ಪರಿಶೀಲನೆಯ ನಂತರ, ಕೆರೆಯ ಅಭಿವೃದ್ಧಿ ಹಾಗೂ ನಾಗರಿಕ ಸೌಲಭ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶಗಳನ್ನು ನೀಡಿದರು.
ಯುಜಿಡಿ ವ್ಯವಸ್ಥೆಯ ಸಮಗ್ರ ತಾಂತ್ರಿಕ ಪರಿಶೀಲನೆ
ಕೆರೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಳಚರಂಡಿ ನೀರು ಹಿಮ್ಮುಖವಾಗಿ ಹರಿಯುತ್ತಿರುವುದು ಮತ್ತು ಪೈಪ್ಲೈನ್ಗಳ ಬ್ಲಾಕೇಜ್ ಬಗ್ಗೆ ಸಾರ್ವಜನಿಕರು ಆಯುಕ್ತರ ಗಮನಕ್ಕೆ ತಂದರು. ಈ ಕೂಡಲೇ ಇಡೀ ಯುಜಿಡಿ ಜಾಲದ ಸಾಮರ್ಥ್ಯ, ಹೂಳು ತೆಗೆಯುವಿಕೆ ಮತ್ತು ಎಸ್ಟಿಪಿ ಘಟಕಗಳ ಕಾರ್ಯಕ್ಷಮತೆಯ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.

*ಸಾರ್ವಜನಿಕರ ಅಹವಾಲಿಗೆ ಸ್ಪಂದನೆ*
ಸರಿಸುಮಾರು 2.5 ಕಿ.ಮೀ ಉದ್ದದ ಈ ಪರಿಶೀಲನಾ ಮಾರ್ಗದಲ್ಲಿ ಸಾರಕ್ಕಿ ವಾಕರ್ಸ್ ಗ್ರೂಪ್ನ ಶ್ರೀ ಉಮೇಶ್ ಗೌಡ ಮತ್ತು ನೂರಾರು ಸ್ಥಳೀಯ ನಿವಾಸಿಗಳು ಪಾಲ್ಗೊಂಡು ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು. ಸಾರ್ವಜನಿಕರ ದೂರುಗಳನ್ನು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಕಾರ್ಯಪಾಲಕ ಅಭಿಯಂತರರಾದ ಶ್ರೀ ರವಿ, ಶ್ರೀಮತಿ ದೀಪಶ್ರಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
For More Updates Join our WhatsApp Group :




