ಯುವ ಸಂಗಮ ಕಾರ್ಯಕ್ರಮ : ಲೋಕಭವನದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲರ ಮಾತುಕತೆ.!
ಬೆಂಗಳೂರು: ಯುವ ಸಂಗಮ ಕಾರ್ಯಕ್ರಮದ ಅಂಗವಾಗಿ ಕರ್ನಾಟಕಕ್ಕೆ ಭೇಟಿ ನೀಡಿದ ರಾಜಸ್ಥಾನದ ವಿದ್ಯಾರ್ಥಿಗಳೊಂದಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ಚಂದ್ ಗೆಹ್ಲೋಟ್ ಅವರು ಸೋಮವಾರ ಲೋಕಭವನದಲ್ಲಿ ಸಂವಾದ ನಡೆಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಇಂತಹ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳು ದೇಶದ ವಿವಿಧ ರಾಜ್ಯಗಳ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಅಭಿವೃದ್ಧಿಯ ವೈಶಿಷ್ಟ್ಯಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರಾಷ್ಟ್ರೀಯ ಏಕತೆಯನ್ನು ಬಲಪಡಿಸುತ್ತವೆ ಎಂದು ಹೇಳಿದರು.

ಯುವ ಸಂಗಮ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಭಾರತದ ವೈವಿಧ್ಯತೆಯನ್ನು ಅರ್ಥಮಾಡಿಕೊಳ್ಳಲು ಮತ್ತು ವಿವಿಧ ರಾಜ್ಯಗಳ ಅಭಿವೃದ್ಧಿ ಹಾಗೂ ಅನುಭವಗಳಿಂದ ಕಲಿಯಲು ಉತ್ತಮ ವೇದಿಕೆಯಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ಕರೆ ನೀಡಿದರು.
ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, ದೇಶವನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಯುವಕರು ಶ್ರಮ ಮತ್ತು ಸಮರ್ಪಣೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು ರಾಷ್ಟ್ರ ನಿರ್ಮಾಣದಲ್ಲಿ ಪಾಲುದಾರರಾಗುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
For More Updates Join our WhatsApp Group :



