ಚೆನ್ನೈನಿಂದ ಮಂಗಳೂರಿಗೆ ಡ್ರಗ್ಸ್ ಸಾಗಾಟ: 21 ವರ್ಷದ ವಿದ್ಯಾರ್ಥಿನಿ ಪೊಲೀಸರ ಬಲೆಗೆ
ಮಂಗಳೂರು: Mangaluruನಲ್ಲಿ ಮಾದಕ ದ್ರವ್ಯ ಸಾಗಾಟದ ವಿರುದ್ಧ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ 21 ವರ್ಷದ ಸುಹಾನ ಎಂಬ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ಆರೋಪಿತೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ BCA ವಿದ್ಯಾರ್ಥಿನಿಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಮೇ 12ರಂದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪಣಂಬೂರು ಎಸಿಪಿ ತಂಡ ಮತ್ತು Mulki Police Station ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು. ಬಂಧಿತಳಿಂದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಚೆನ್ನೈನಿಂದ ಮಂಗಳೂರಿಗೆ ತರಲಾಗಿದ್ದು, ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶ ಹೊಂದಿದ್ದಳು ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಪೊಲೀಸರು ಈ ಜಾಲದ ಹಿಂದೆ ಇನ್ನೂ ದೊಡ್ಡ ಮಟ್ಟದ ಜಾಲ ಇರುವ ಶಂಕೆ ವ್ಯಕ್ತಪಡಿಸಿದ್ದಾರೆ.
ತನಿಖೆಯಲ್ಲಿ ಸುಹಾನ ವಿರುದ್ಧ ಈಗಾಗಲೇ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಅಲ್ಲದೆ Kempegowda International Airport ಕಸ್ಟಮ್ಸ್ ಇಲಾಖೆಯಲ್ಲಿಯೂ ಮಾದಕ ದ್ರವ್ಯ ಸಾಗಾಟ ಪ್ರಕರಣ ದಾಖಲಾಗಿರುವುದು ಬಹಿರಂಗವಾಗಿದೆ. ಪ್ರಸ್ತುತ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




