ಮಳೆಗಾಲ ಮುನ್ನ ಕಾಮಗಾರಿ ವೇಗಕ್ಕೆ ಆದೇಶ: ಶಿಥಿಲ ಕಟ್ಟಡ ತೆರವಿಗೆ ಡಿ.ಎಸ್. ರಮೇಶ್ ಎಚ್ಚರಿಕೆ.!
ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆಯ ಕಾಮಗಾರಿ ವಿಭಾಗಕ್ಕೆ ಸಂಬಂಧಿಸಿದಂತೆ ಬೃಹತ್ ಮಳೆ ನೀರು ಕಾಲುವೆಗಳ ನಿರ್ವಹಣೆ, ಸಿಎಂಐಡಿಪಿ ಮತ್ತು ಎಸ್ಎಸ್ಐಪಿ ಅನುದಾನದಡಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಶಿಥಿಲಾವಸ್ಥೆ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಆಯುಕ್ತರಾದ ಡಿ.ಎಸ್.ರಮೇಶ್ ರವರು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.
*ಶಿಥಿಲಗೊಂಡಿರುವ ಹಳೆಯ ಕಟ್ಟಡ ಮತ್ತು ಕಾಂಪೌಂಡ್ ತೆರವುಗೊಳಿಸಿ*
ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಶಿಥಿಲಗೊಂಡಿರುವ ಹಳೆ ಕಟ್ಟಡಗಳು, ಕಾಂಪೌಂಡ್ಗಳು, ತಡೆಗೋಡೆಗಳು,ಇನ್ನಿತರೆ ಅಪಾಯಕಾರಿ ನಿರ್ಮಾಣಗಳನ್ನು ಕೂಡಲೇ ಗುರುತಿಸುವುದು. ಸರ್ಕಾರಿ ಜಾಗಗಳಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸಲು ಕ್ರಮವಹಿಸುವುದು ಹಾಗೂ ಖಾಸಗೀ ಸ್ವತ್ತಿನಲ್ಲಿರುವ ಅಪಾಯಕಾರಿ ಕಟ್ಟಡಗಳ ತೆರವಿಗೆ ನೋಟಿಸ್ ನೀಡುವುದರೊಂದಿಗೆ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ, ಸಾರ್ವಜನಿಕ ಪ್ರಕಟಣೆ ಪ್ರಕಟಿಸುವುದು, ಸಾರ್ವಜನಿಕರು ಮತ್ತು ವಾಹನ ಸವಾರರು ಸಂಚರಿಸದಂತೆ ಬದಲಿ ವ್ಯವಸ್ಥೆ ಕಲ್ಪಿಸಲು ಆಯುಕ್ತರು ಸೂಚಿಸಿದರು.

ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ಕಟ್ಟಡ ಅಥವಾ ನಿರ್ಮಾಣಗಳಿಂದ ಯಾವುದೇ ತೊಂದರೆಯಾದರೆ ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರೇ ನೇರ ಜವಾಬ್ದಾರರಾಗಿದ್ದು, ಶಿಥಿಲಗೊಂಡಿರುವ ಕಟ್ಟಡಗಳ ತೆರವಿಗೆ ನಿರ್ದಾಕ್ಷಿಣ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.
ಇಂದು ನಡೆದ ಸಭೆಯಲ್ಲಿ ಅಪರ ಆಯುಕ್ತರು(ಅಭಿವೃದ್ದಿ) ಲೋಖಂಡೆ ಸ್ನೇಹಲ್ ಸುಧಾಕರ್, ಮುಖ್ಯ ಅಭಿಯಂತರರಾದ ಕೃಷ್ಣಮೂರ್ತಿ, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.
For More Updates Join our WhatsApp Group :




