ಮಳೆಗಾಲ ಮುನ್ನ 15 ದಿನಗಳಲ್ಲಿ ಹೂಳೆತ್ತುವ ಕಾಮಗಾರಿ ಪೂರ್ಣಕ್ಕೆ ಜಲಮಂಡಳಿ ಅಧ್ಯಕ್ಷರ ಸೂಚನೆ.!

ಮಳೆಗಾಲ ಮುನ್ನ 15 ದಿನಗಳಲ್ಲಿ ಹೂಳೆತ್ತುವ ಕಾಮಗಾರಿ ಪೂರ್ಣಕ್ಕೆ ಜಲಮಂಡಳಿ ಅಧ್ಯಕ್ಷರ ಸೂಚನೆ.!

ಬೆಂಗಳೂರು ಒಳಚರಂಡಿ ನಿರ್ವಹಣೆಗೆ ಡೆಡ್‌ಲೈನ್: ಅಧಿಕಾರಿಗಳಿಗೆ ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ.!

ಬೆಂಗಳೂರು: ಮುಂಬರುವ ಮಳೆಗಾಲದಲ್ಲಿ ನಗರದ ಜನತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಮುಂದಿನ 15 ದಿನಗಳ ಒಳಗಾಗಿ ಒಳಚರಂಡಿ ಹೂಳೆತ್ತುವ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಮುಂಗಾರು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಮಹತ್ವದ ನಿರ್ದೇಶನಗಳನ್ನು ನೀಡಿದರು.

“ಮಳೆಗಾಲದಲ್ಲಿ ನಗರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗದಂತೆ ಹಾಗೂ ಮ್ಯಾನ್‌ಹೋಲ್‌ಗಳು ಉಕ್ಕಿಹರಿಯದಂತೆ ತಡೆಯುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಮಳೆಯಿಂದ ಹಾನಿಗೊಳಗಾಗುವ ಸೂಕ್ಷ್ಮ ಪ್ರದೇಶಗಳನ್ನು ತಕ್ಷಣವೇ ಗುರುತಿಸಿ, ಮುಂದಿನ 15 ದಿನಗಳ ಒಳಗೆ ಕಡ್ಡಾಯವಾಗಿ ಮ್ಯಾನ್‌ಹೋಲ್‌ಗಳ ಸ್ವಚ್ಛತೆ ಹಾಗೂ ಹೂಳೆತ್ತುವ ಕಾರ್ಯವನ್ನು (Desilting) ಪೂರ್ಣಗೊಳಿಸಬೇಕು,” ಎಂದು ನಿರ್ದೇಶನ ನೀಡಿದರು.

ಕ್ಷೇತ್ರ ಮಟ್ಟದ ಪರಿಶೀಲನೆ ಹಾಗೂ ತಾಂತ್ರಿಕ ಎಚ್ಚರಿಕೆ ಕುರಿತು ಮಾತನಾಡಿದ ಅವರು, “ಯಾವುದೇ ಕಾರಣಕ್ಕೂ ಮಳೆನೀರು ನಮ್ಮ ಒಳಚರಂಡಿ ವ್ಯವಸ್ಥೆಯೊಳಗೆ ನುಗ್ಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ವಲಯವಾರು ಮುಖ್ಯ ಅಭಿಯಂತರರು ಕೇವಲ ಕಚೇರಿಗೆ ಸೀಮಿತವಾಗದೆ, ಖುದ್ದು ಸ್ಥಳಗಳಿಗೆ ಭೇಟಿ ನೀಡಿ ಈ ಕಾರ್ಯಗಳ ಬಗ್ಗೆ ವಾಸ್ತವ ಪರಿಶೀಲನೆ ನಡೆಸಬೇಕು. ಹಾಗೆಯೇ, ತಾವು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಕೇಂದ್ರ ಕಚೇರಿಗೆ ಸಮಗ್ರ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ,” ಎಂದು ಹೇಳಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *