Abbi Fallsನಲ್ಲಿ ಕಾಲು ಜಾರಿ ಬಿದ್ದು ಕೊಚ್ಚಿ ಹೋದ ಬೆಂಗಳೂರು ಪ್ರವಾಸಿಗ

ಹೊಸನಗರ: ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್‌ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್​ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ 26 ವರ್ಷದ ವಿನೋದ್ ಎಂದು ಗುರುತಿಸಲಾಗಿದೆ. ಈತ ಬಳ್ಳಾರಿ ಮೂಲದವನಾಗಿದ್ದು, ಪ್ರವಾಸಕ್ಕೆ ತೆರಳಿದ್ದ ವೇಳೆ ಫಾಲ್ಸ್​ಗೆ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ನಾಪತ್ತೆಯಾದ ವಿನೋದ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದನಂತೆ. 12 ಜನರ ತಂಡದೊಂದಿಗೆ ಆಗಮಿಸಿ, ಕೊಡಚಾದ್ರಿಯಿಂದ ಅಬ್ಬೆ ಫಾಲ್ಸ್​ಗೆ ತೆರಳಿದ್ದರು. ಇದೇ ವೇಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾಲ್ಸ್‌ ಬಳಿ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ.

ಸದ್ಯ ನಾಪತ್ತೆಯಾಗಿರುವ ವಿನೋದ್​ಗಾಗಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲೆಯಾಗಿರುವ ಕಾರಣ ಪತ್ತೆ ಕಾರ್ಯಕ್ಕೆ ತೊಡಕು ಉಂಟಾಗಿದೆ. ಈ ಹಿಂದೆ ಕೊಲ್ಲೂರು ಘಾಟಿಗೆ ಹೊಂದಿಕೊಂಡಿರುವ ಅರಿಶಿನ ಗುಂಡಿ ಫಾಲ್ಸ್​ನಲ್ಲಿ ಭದ್ರಾವತಿ ಯುವಕ ಶರತ್ ಕಾಲು ಜಾರಿ ಬಿದ್ದಿದ್ದರು. ಶರತ್ ಕಾಲು ಜಾರಿ ಜಲಪಾತದಲ್ಲಿ ಬೀಳುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು

Leave a Reply

Your email address will not be published. Required fields are marked *