ಬೆಂಗಳೂರಿನ ಗುರುದ್ವಾರವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ?Bomb

ಬೆಂಗಳೂರಿನ ಗುರುದ್ವಾರವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ? Bomb

ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್​​ಡಿಎಕ್ಸ್ ಸ್ಫೋಟಿಸುವುದಾಗಿ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು ಆಧರಿಸಿ ಕೇಸ್ ದಾಖಲಿಸಿದ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಸಂದೇಶಗಳು ಹೆಚ್ಚಾಗುತ್ತಿರುವುದು ಪೊಲೀಸರ ನಿದ್ದೆಗೆಡಿಸಿದೆ. ಆರು ದಿನಗಳ ಹಿಂದಷ್ಟೇ, ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ತಕ್ಷಣವೇ ಹಲಸೂರು ಗೇಟ್ ಪೊಲೀಸರು ಮತ್ತು ಶ್ವಾನದಳ ಕೋರ್ಟ್ ಆವರಣವನ್ನು ಪರಿಶೀಲಿಸಿ, ಅದೊಂದು ಹುಸಿ ಬಾಂಬ್ ಬೆದರಿಕೆ ಎಂಬುದನ್ನು ಪತ್ತೆ ಹಚ್ಚಿತ್ತು.

ಜುಲೈ 27ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿ ಮತ್ತು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

ತಿಂಗಳ ಹಿಂದಷ್ಟೇ ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಇದರಿಂದ ಶಾಲೆಗಳಲ್ಲಿ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿತ್ತು. ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ ತಪಾಸಣೆ ನಡೆಸಲಾಗಿತ್ತು. ನಂತರ ಅದೂ ಸಹ ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *