ರಾಜ್ಯ ಸರ್ಕಾರದ ಹೊಸ ಮೀಸಲಾತಿ ಸೂತ್ರಕ್ಕೆ ಬ್ರೇಕ್

ಬೆಂಗಳೂರು: ಪಂಚಮಸಾಲಿ ಲಿಂಗಾಯತರು ಮತ್ತು ಒಕ್ಕಲಿಗರಿಗಾಗಿ (Panchamasali Lingayats and Vokkaligas) ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಪ್ರತ್ಯೇಕ ಮೀಸಲಾತಿಗೆ (Reservation) ಹೈಕೋರ್ಟ್ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ ಹೊಸದಾಗಿ ಸೃಷ್ಟಿಸಿದ್ದ ಪ್ರವರ್ಗ 2ಸಿ, 2ಡಿ ಮೀಸಲಾತಿಗೆ ಹೈಕೋರ್ಟ್ (High Court) ತಡೆ ನೀಡಿ ಯಥಾ ಸ್ಥಿತಿ ಕಾಪಾಡಿಕೊಳ್ಳಲು ಸೂಚಿಸಿದೆ.

ಡಿಸೆಂಬರ್ 29ರ ಸಂಪುಟ ಸಭೆಯಲ್ಲಿ ಕೈಗೊಂಡ ಮೀಸಲಾತಿ ನಿರ್ಧಾರ ಪ್ರಶ್ನಿಸಿ ರಾಘವೇಂದ್ರ ಎನ್ನುವವರು ಹೈಕೋರ್ಟ್ ಮೆಟ್ಟಿಲೇರಿ ಪಿಐಎಲ್ ದಾಖಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಮುಂದಿನ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಇದನ್ನು ಆಯೋಗ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದು, ಸರ್ಕಾರ ಈ ವರದಿ ಪರಿಶೀಲಿಸಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬ ವಿಚಾರವನ್ನು ಹೈಕೋರ್ಟ್ ಗಮನಕ್ಕೆ ತಂದರು.

ಹೈಕೋರ್ಟ್ ನೀಡಿದ ತಡೆಯಾಜ್ಞೆ ಆದೇಶ ಸರ್ಕಾರವನ್ನು ಬೀಸೋ ದೊಣ್ಣೆಯಿಂದ ಪಾರು ಮಾಡಿದೆ ಎಂದೇ ಹೇಳಬಹುದು. ಯಾಕಂದ್ರೆ ಸರ್ಕಾರ ಇನ್ನೂ ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲ್ಲ. ಹೀಗಾಗಿ ಮೀಸಲಾತಿ ಯಾವ ರೀತಿ ಹಂಚಿಕೆ ಆಗುತ್ತೆ ಎಂಬುದರ ಕಲ್ಪನೆ ಯಾರಲ್ಲೂ ಇಲ್ಲ. ಒಂದೊಮ್ಮೆ ಅಧಿಸೂಚನೆ ಪ್ರಕಟವಾಗಿದ್ದರೆ ಭಾರೀ ಆಕ್ಷೇಪ ವ್ಯಕ್ತವಾಗುವ ಸಾಧ್ಯತೆ ಇತ್ತು.

ಈಗಾಗಲೇ ಪಂಚಮಸಾಲಿ ಸಮುದಾಯ ತಗಾದೆ ತೆಗೆದಿತ್ತು. ನಮ್ಮನ್ನು 2ಎಗೆ ಸೇರಿಸಬೇಕೆಂದು ಬೇಡಿಕೆ ಇಟ್ಟು, ಇವತ್ತಿಗೆ ಗಡುವು ಕೂಡ ನೀಡಿತ್ತು. 2ಎ ಮೀಸಲಾತಿ ಕೊಡದಿದ್ದರೆ ಜನವರಿ 13ರಿಂದ ಶಿಗ್ಗಾಂವಿಯ ಸಿಎಂ ಮನೆ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಪಂಚಮಸಾಲಿ ಸಮುದಾಯದ ಜಯಮೃತ್ಯುಂಜಯಸ್ವಾಮೀಜಿ ನೀಡಿದ್ದರು.

Pragati TV Social Connect for more latest u

Leave a Reply

Your email address will not be published. Required fields are marked *