ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ BUS.

ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ BUS.

ಹಾವೇರಿಯಲ್ಲಿ ಭೀಕರ ಬಸ್ ಅಪಘಾತ: ನಿಲ್ದಾಣದಲ್ಲಿ ಜನರ ಮೇಲೆ ನುಗ್ಗಿ.

ಹಾವೇರಿ : ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.

ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್ ಅಲಿಗೆ ತೀವ್ರವಾಗಿ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಉಳಿದ ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *