Honeytrap ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಜೋಡಿ ಲಾಡ್ಜ್ ನಲ್ಲಿ ಸಿಕ್ಕಿಬಿತ್ತು..?

Honeytrap ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಜೋಡಿ ಲಾಡ್ಜ್ ನಲ್ಲಿ ಸಿಕ್ಕಿಬಿತ್ತು..?

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ಗೆ ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಜೋಡಿಯನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹನಿಟ್ರ್ಯಾಪ್ ಮಾಡಿ ತಲೆಮರೆಸಿಕೊಂಡಿದ್ದ ಕವನ ಹಾಗೂ ಸೈಫ್ ಎನ್ನುವರನ್ನು ಕೇರಳದ ಕಣ್ಣೂರಿನ ಲಾಡ್ಜ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ಸಂಬಂಧ ಬೈಲಕುಪ್ಪೆ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಯುವತಿ ಸೇರಿದಂತೆ ಆರೋಪಿ ಮೂರ್ತಿಯನ್ನ ಅರೆಸ್ಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಇದೇ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಹುಣಸೂರು ಠಾಣೆ ಕಾನ್ಸ್ ಟೇಬಲ್ ಶಿವಣ್ಣನನ್ನ ಅರೆಸ್ಟ್ ಜೈಲಿಗಟ್ಟಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ನನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಕವನ ಹಾಗೂ ಸೈಫ್ ಜೋಡಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿತ್ತು. ಈ ಸಂಬಂಧದಿನೇಶ್ ಕುಮಾರ್ ಬೈಲಕುಪ್ಪೆ ಠಾಣೆಗೆ ದೂರು ನೋಡಿದ್ದರು. ಬಳಿಕ ಕಾರ್ಯಚರಣೆ ನಡೆಸಿದ ಪೊಲೀಸರು, ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಶಿವಣ್ಣ, ಆನಂದ್ ಹಾಗೂ ಮೂರ್ತಿಯನ್ನು ಬಂಧಿಸಿದ್ದರು. ಆದ್ರೆ, ಹನಿಟ್ರ್ಯಾಪ್ ನ ಕಿಂಗ್ ಪಿನ್ ಗಳಾಗಿದ್ದ ಕವನ, ಸೈಫ್ ತಲೆಮರೆಸಿಕೊಂಡಿದ್ದರು.

Leave a Reply

Your email address will not be published. Required fields are marked *