ಸಾವಿರಾರು ಅಭಿಮಾನಿಗಳು, ರಾಜಕೀಯ ನಾಯಕರು ಕಣ್ಣೀರಿಟ್ಟು ಶ್ರದ್ಧಾಂಜಲಿ ಸಲ್ಲಿಸಿದರು.
ಪುಣೆ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು
. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದೆ ಸಾವಿರಾರು ಜನರು ತಮ್ಮ ನೆಚ್ಚಿನ ದಾದಾ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನೋಡಲು ಆಗಮಿಸಿದ್ದರು. ಅಲ್ಲಿ ಸೇರಿದ್ದವರ ಕಣ್ಣುಗಳು ಕಣ್ಣೀರಿನಿಂದ ತುಂಬಿದ್ದವು. ಅಲ್ಲಿದ್ದ ಪ್ರತಿಯೊಬ್ಬರೂ ಅಜಿತ್ ಪವಾರ್ಗಾಗಿ ಕಂಬನಿ ಮಿಡಿಯುತ್ತಿದ್ದರು.
For More Updates Join our WhatsApp Group :



